ಬೆಂಗಳೂರು: ನಗರದಲ್ಲಿ ಜೆಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶ್ರೀ ವೀರಭದ್ರಸ್ವಾಮಿ ಪಲ್ಲಕ್ಕಿ ಉಸ್ತವ ನಾಳೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಬೆಳಿಗ್ಗೆ 6 ಗಂಟೆಯಿಂದ ಮೇ.12ರ ಮಧ್ಯಾಹ್ನದ ವರೆಗೆ ಮದ್ಯಮಾರಾಟ ನಿಷೇಧ ಮಾಡಿ ಆದೇಶಿಸಲಾಗಿದೆ.
ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಆದೇಶ ಹೊರಡಿಸಿದ್ದು, ದಿನಾಂಕ: 11-05-2024 ರಂದು ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಪೂರ್ವ ವಿಭಾಗದ ಜೆ.ಬಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಶ್ರೀ ವೀರಭದ್ರಸ್ವಾಮಿಯ ಪಲ್ಲಕ್ಕಿ ಉತ್ಸವ ನಡೆಯಲಿದ್ದು, ಈ ಉತ್ಸವದಲ್ಲಿ ಸುಮಾರು 30 ಪಲ್ಲಕ್ಕಿಗಳು ಭಾಗವಹಿಸಲಿದ್ದು, ಸದರಿ ಉತ್ಸವದಲ್ಲಿ ಸಾವಿರಾರು ಭಕ್ತಾಧಿಗಳು ಪಾಲ್ಗೊಳ್ಳಲಿದ್ದು, ಈ ಸಮಯದಲ್ಲಿ ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ದುಷ್ಕೃತ್ಯಗಳನ್ನು ನಡೆಸಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಹಾಳುಮಾಡುವ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಕಿಡಿಗೇಡಿಗಳು ಕೋಮುಗಲಬೆಗಳಿಗೆ ಪ್ರಚೋದಿಸಿ ದುಷ್ಕೃತ್ಯಗಳನ್ನು ಎಸಗುವ, ಕಾನೂನುಬಾಹಿರ ಕೃತ್ಯಗಳನ್ನೆಸಗಿ ಸಾರ್ವಜನಿಕ ಸುವ್ಯವಸ್ಥೆಗೆ ಭಂಗವನ್ನುಂಟುಮಾಡುವ ಸಂಭವವಿರುವುದಾಗಿ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ದಿನಾಂಕ: 11-05-2024 ರ ಬೆಳಿಗ್ಗೆ 6-00 ಗಂಟೆಯಿಂದ ದಿನಾಂಕ: 12-06-2024 ರಂದು ಮಧ್ಯಾಹ್ನ 1-00 ಗಂಟೆಯವೆಗೆ ಪೂರ್ವ ವಿಭಾಗದ ಜೆ.ಬಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿ, ಬಾರ್ & ರೆಸ್ಟೋರೆಂಟ್‌ಗಳನ್ನು ಮುಚ್ಚುವಂತೆ (ಸ್ಟಾರ್ ಹೋಟೆಲ್ ಮತ್ತು ಕ್ಲಬ್‌ಗಳನ್ನು ಹೊರತುಪಡಿಸಿ) ಮದ್ಯ ಮಾರಾಟವನ್ನು ನಿಷೇಧಿಸುವಂತೆ ಉಪ ಪೊಲೀಸ್ ಆಯುಕ್ತರು, ಪೂರ್ವ ವಿಭಾಗ ರವರು ಉಲ್ಲೇಖಿತ ಪತ್ರದಲ್ಲಿ ಕೋರಿರುತ್ತಾರೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ನಾನು ಸ್ವತಃ ಪರಿಶೀಲಿಸಲಾಗಿ ಹಾಗೂ ಗುಪ್ತವಾರ್ತಾ ಮಾಹಿತಿಯಿಂದ ಸಾಕಷ್ಟು ಸತ್ಯಾಂಶವಿದೆಯೆಂದು ತಿಳಿದುಬಂದಿರುವುದರಿಂದ ಪಲ್ಲಕ್ಕಿಗಳ ಉತ್ಸವದ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗವುಂಟಾಗದಂತೆ ಹಾಗೂ ಅಹಿತಕರ ಘಟನೆಗಳನ್ನು ತಡೆಯುವ ಅವಶ್ಯಕತೆ ಇರುವುದರಿಂದ ಈ ದಿಸೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಭಾರತೀಯ ದಂಡ ಪ್ರಕ್ರಿಯ ಸಂಹಿತೆಯ ಕಲಂ, 144 ರ ಉಪ ಕಲಂ, (I) ಮತ್ತು (3) ರ ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಬಿ.ದಯಾನಂದ, ಭಾ.ಪೊ.ಸೇ. ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಆದ ನಾನು ದಿನಾಂಕ: 11-05-2024 ರಂದು ಬೆಳಿಗ್ಗೆ 6-00 ಗಂಟೆಯಿಂದ ದಿನಾಂಕ: 12-05-2024 ರ ಮಧ್ಯಾಹ್ನ 1.00 ಗಂಟೆಯವರೆಗೆ ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಪೂರ್ವ ವಿಭಾಗದ ಜೆ.ಬಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೀತಿಯ ಬಾರ್‌ಗಳು, ವೈನ್ ಶಾಪ್‌ಗಳು, ಪಬ್‌ಗಳು ಹಾಗೂ ಎಲ್ಲಾ ರೀತಿಯ ಮದ್ಯ ಮಾರಾಟ ಮಾಡುವ ಅಂಗಡಿಗಳನ್ನು (CL-4 & CL-6A ಪರವಾನಗಿಗಳನ್ನು ಹೊರತುಪಡಿಸಿ) ಮುಚ್ಚಲು ಹಾಗೂ ಮಾರಾಟವನ್ನು ಮಾಡದಿರಲು ನಿಷೇಧಾಜ್ಞೆಯನ್ನು ವಿಧಿಸಿರುತ್ತೇನೆ ಎಂದು ತಿಳಿಸಿದ್ದಾರೆ.
ಶಾಸಕ ಹೆಚ್.ಡಿ ರೇವಣ್ಣ ಬಂಧನದಲ್ಲಿ ರಾಜಕೀಯ ಹಸ್ತಕ್ಷೇಪ ಇಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ
ಮಂಡ್ಯ ಜಿಲ್ಲೆಗೆ ‘SSLC ಪರೀಕ್ಷೆ’ಯಲ್ಲಿ ಎಸ್ ಖುಷಿ ತೃತೀಯ, ಮದ್ದೂರು ತಾಲೂಕಿಗೆ ಗಗನ್ ಎಸ್ ಗೌಡ ಪ್ರಥಮ