ಉಡುಪಿ : ಅರಬ್ಬಿ ಸಮುದ್ರದ ಅಬ್ಬರ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ, ಉಡುಪಿ ಜಿಲ್ಲಾ ಆಡಳಿತ, ಪ್ರವಾಸೋದ್ಯಮ ಇಲಾಖೆ ಸೇಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸಿಗರಿಗೆ ಅನುಮತಿಯನ್ನು ನಿರಾಕರಣೆ ಮಾಡಿದೆ.
ಮುಂದಿನ 4 ತಿಂಗಳು ಯಾವುದೇ ಬೋಟುಗಳು, ದೋಣಿಗಳು ಸೇಂಟ್ ಮೇರಿಸ್ ದ್ವೀಪಕ್ಕೆ ಹೋಗುವಂತಿಲ್ಲ ಎನ್ನಲಾಗಿದೆ.ಸಮುದ್ರದ ಅಬ್ಬರ ಅಲೆಗಳ ಹೊಡೆತ ಹೆಚ್ಚಾಗಿರುವ ಕಾರಣ ಪ್ರವಾಸಿ ಬೋಟ್ ಗಳು ಸಮುದ್ರಕ್ಕೆ ಇಳಿಯುವುದು ಅಪಾಯಕಾರಿಯಾಗಿದೆ. ಇದಲ್ಲದೇ ಸದ್ಯ ಮಳೆಗಾಲ ಶುರುವಾಗಿದ್ದು, ಮುಂಜಾಗ್ರತ ಕ್ರಮವಾಗಿ ಈ ನಿರ್ಧಾರವನ್ನು ಜಿಲ್ಲಾಡಳಿತ ಕೈಗೊಂಡಿದ್ದು, ಸೆಪ್ಟಂಬರ್ ಬಳಿಕ ವೇ ದ್ವೀಪಕ್ಕೆ ಪ್ರವಾಸಿಗರನ್ನು ಬಿಡುವ ಸಾಧ್ಯತೆ ಇದೇ ಎನ್ನಲಾಗಿದೆ. ಮಲ್ಪೆ ಬಂದರು ವ್ಯಾಪ್ತಿಯಲ್ಲಿ ಹಾರ್ಬರ್ ಕ್ರಾಫ್ಟ್ ನಿಯಮದಡಿ ನೀಡಲಾದ ಪರವಾನಿಗೆಯಂತೆ ಮಲ್ಪೆ ಬೀಚ್, ಸೀವಾಕ್ ಪ್ರದೇಶದಲ್ಲಿ ಓಡಾಟ ನಡೆಸುವ ಎಲ್ಲಾ ತರಹದ ಪ್ರವಾಸೀ ಬೋಟ್ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದೆ