Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಇಂದು ತಮಿಳುನಾಡು ಮುಖ್ಯಮಂತ್ರಿಯಾಗಿ ನಟ ವಿಜಯ್ ಅಧಿಕಾರ ಸ್ವೀಕಾರ | Actor Vijay oath

07/05/2026 9:24 AM

SHOCKING : ಜಗತ್ತಿಗೆ ಕಾಲಿಟ್ಟ ಮತ್ತೊಂದು ಮಹಾಮಾರಿ ವೈರಸ್ : `ಹ್ಯಾಂಟವೈರಸ್‌’ಗೆ ಮೂವರು ಬಲಿ.!

07/05/2026 9:22 AM

ವಯಸ್ಸಿನ ಆಧಾರದ ಯಾರು ಎಷ್ಟು ಕಿಲೋಮೀಟರ್ ನಡೆಯಬೇಕು? ಇಲ್ಲಿದೆ ಮಾಹಿತಿ 

07/05/2026 9:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ : ರಾಜ್ಯದಲ್ಲಿ ʻಚಿಕನ್ ಕಬಾಬ್, ಫಿಶ್ ಆಹಾರದಲ್ಲಿ ಕೃತಕ ಬಣ್ಣ ಬಳಕೆ ನಿಷೇಧ
KARNATAKA

ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ : ರಾಜ್ಯದಲ್ಲಿ ʻಚಿಕನ್ ಕಬಾಬ್, ಫಿಶ್ ಆಹಾರದಲ್ಲಿ ಕೃತಕ ಬಣ್ಣ ಬಳಕೆ ನಿಷೇಧ

By kannadanewsnow5725/06/2024 8:37 AM

ಬೆಂಗಳೂರು : ಫಿಶ್ ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ಆಹಾರ ಸುರಕ್ಷತೆ ವಿಚಾರದಲ್ಲಿ ಜನರಲ್ಲಿ ಹೆಚ್ಚು ಜಾಗೃತಿ ಮೂಡಸುವಂತೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.

ಫಿಶ್ ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನ ನಿಷೇಧಿಸಲಾಗಿತ್ತು.

ಇದೇ ವೇಳೆ ಚಿಕನ್ ಕಬಾಬ್ ಗಳಲ್ಲೂ ಕೃತಕ ಬಣ್ಣಗಳ ಬೆರಸುವಿಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪರೀಕ್ಷೆಗೊಳಪಡಿಸಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆಹಾರ ಸುರಕ್ಷತಾ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದರು. ಕಳಪೆಗುಣಮಟ್ಟದ ಆಹಾರ ಸೇವನೆ ಇತ್ತಿಚೆಗೆ ಜನರ ಆರೋಗ್ಯದ ಮೇಲೆ ತೀವ್ರ ಹಾನಿಯನ್ನುಂಟುಮಾಡುತ್ತಿದೆ. ಜನಸಾಮಾನ್ಯರ ಆರೋಗ್ಯದ ದೃಷ್ಟಿಯಿಂದ ಹಾನಿಕಾರಕ ಆಹಾರದ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸಚಿವರ ಸೂಚನೆಯ ಮೇರೆಗೆ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳು ಗುಣಮಟ್ಟ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಚಿಕನ್ ಕಬಾಬ್ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಚಿಕನ್ ಕಬಾಬ್, ಫಿಶ್ ಆಹಾರಗಳಲ್ಲಿ ಕೃತಕ ಬಣ್ಣ ಬೆರಸುವಿಕೆಯನ್ನ ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಗಿರುತ್ತದೆ. ವಿಶ್ಲೇಷಣೆಗೊಳಪಡಿಸಲಾದ ಮಾದರಿಗಳಲ್ಲಿ 08 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ (ಸನ್‌ಸೆಟ್ ಯೆಲ್ಲೋ 07 ಮಾದರಿಗಳು ಹಾಗೂ ಸನ್‌ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಹೊಂದಿರುವ ಮಾದರಿಗಳು 01) ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದೆ. The Food Safety and Standards Act, 2006 ರ ನಿಯಮ 3(1)(zz)(viii)ರನ್ವಯ ಅಸುರಕ್ಷಿತ ಎಂದು ವರದಿ ಮಾಡಲ್ಪಟ್ಟಿರುತ್ತವೆ.

The Food Safety and Standards (Food Products Standards and Food Additives) Regulations, 2011 ರ‌ ಅನ್ವಯ ಯಾವುದೇ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿರುವುದಿಲ್ಲ. ಕೃತಕ ಬಣ್ಣಗಳು ಬಳಕೆದಾರರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟುಮಾಡಬಹುದಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಕಬಾಬ್‌ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದಕ್ಕೆ ಅವಕಾಶವಿಲ್ಲ ಎಂದು ಆದೇಶದಲ್ಲಿ‌ ತಿಳಿಸಲಾಗಿದೆ. ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು ರೂ.10.00 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.‌

Ban on use of artificial colours in chicken kebabs fish food in the state ಫಿಶ್ ಆಹಾರದಲ್ಲಿ ಕೃತಕ ಬಣ್ಣ ಬಳಕೆ ನಿಷೇಧ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ : ರಾಜ್ಯದಲ್ಲಿ ʻಚಿಕನ್ ಕಬಾಬ್
Share. Facebook Twitter LinkedIn WhatsApp Email

Related Posts

ವಯಸ್ಸಿನ ಆಧಾರದ ಯಾರು ಎಷ್ಟು ಕಿಲೋಮೀಟರ್ ನಡೆಯಬೇಕು? ಇಲ್ಲಿದೆ ಮಾಹಿತಿ 

07/05/2026 9:17 AM2 Mins Read

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಆಸ್ಪತ್ರೆಯಲ್ಲಿಯೇ ವಿಧವೆ ಮಹಿಳೆ ಮೇಲೆ ನೌಕರನಿಂದ ಅತ್ಯಾಚಾರ.!

07/05/2026 9:10 AM1 Min Read

ಇನ್ಮುಂದೆ `ಆಧಾರ್ ಕಾರ್ಡ್ ಅಪ್‌ ಡೇಟ್’ ಇನ್ನಷ್ಟು ಸುಲಭ ; ಮನೆಯಲ್ಲೇ ಕುಳಿತು ಈ ಕೆಲಸ ಮಾಡಿ!

07/05/2026 8:56 AM2 Mins Read
Recent News

BIG NEWS: ಇಂದು ತಮಿಳುನಾಡು ಮುಖ್ಯಮಂತ್ರಿಯಾಗಿ ನಟ ವಿಜಯ್ ಅಧಿಕಾರ ಸ್ವೀಕಾರ | Actor Vijay oath

07/05/2026 9:24 AM

SHOCKING : ಜಗತ್ತಿಗೆ ಕಾಲಿಟ್ಟ ಮತ್ತೊಂದು ಮಹಾಮಾರಿ ವೈರಸ್ : `ಹ್ಯಾಂಟವೈರಸ್‌’ಗೆ ಮೂವರು ಬಲಿ.!

07/05/2026 9:22 AM

ವಯಸ್ಸಿನ ಆಧಾರದ ಯಾರು ಎಷ್ಟು ಕಿಲೋಮೀಟರ್ ನಡೆಯಬೇಕು? ಇಲ್ಲಿದೆ ಮಾಹಿತಿ 

07/05/2026 9:17 AM

ತಮಿಳುನಾಡಿನಲ್ಲಿ ವಿಚಿತ್ರ ರಾಜಕೀಯ ಸ್ಥಿತಿ: ವಿಜಯ್ ಅವರ ‘ಟಿವಿಕೆ’ ತಡೆಯಲು ಬದ್ಧ ವೈರಿಗಳ ಮೈತ್ರಿ? ಡಿಎಂಕೆ ಮುಂದೆ ಎಐಎಡಿಎಂಕೆ ಪ್ರಸ್ತಾವನೆ!

07/05/2026 9:14 AM
State News
KARNATAKA

ವಯಸ್ಸಿನ ಆಧಾರದ ಯಾರು ಎಷ್ಟು ಕಿಲೋಮೀಟರ್ ನಡೆಯಬೇಕು? ಇಲ್ಲಿದೆ ಮಾಹಿತಿ 

By kannadanewsnow5707/05/2026 9:17 AM KARNATAKA 2 Mins Read

ಬೆಂಗಳೂರು: ಇಂದಿನ ಓಟದ ಬದುಕಿನಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಒಂದು ದೊಡ್ಡ ಸವಾಲಾಗಿದೆ. ದೈಹಿಕವಾಗಿ ಸದೃಢರಾಗಿರಲು ವ್ಯಾಯಾಮ ಮಾಡುವುದು ಅತಿ ಅಗತ್ಯ.…

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಆಸ್ಪತ್ರೆಯಲ್ಲಿಯೇ ವಿಧವೆ ಮಹಿಳೆ ಮೇಲೆ ನೌಕರನಿಂದ ಅತ್ಯಾಚಾರ.!

07/05/2026 9:10 AM

ಇನ್ಮುಂದೆ `ಆಧಾರ್ ಕಾರ್ಡ್ ಅಪ್‌ ಡೇಟ್’ ಇನ್ನಷ್ಟು ಸುಲಭ ; ಮನೆಯಲ್ಲೇ ಕುಳಿತು ಈ ಕೆಲಸ ಮಾಡಿ!

07/05/2026 8:56 AM

ಸಂಬಳ ಬಂದ ತಕ್ಷಣ ಈ ಕೆಲಸ ಮಾಡಿ: ನಿಮ್ಮ ಜೇಬಿನಲ್ಲಿ ಹಣ ಉಳಿಯುವುದು ಪಕ್ಕಾ!

07/05/2026 8:42 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.