ಆಫ್ಘನ್ ಸಚಿವರ ಸುದ್ದಿಗೋಷ್ಠಿಗೆ ಪತ್ರಕರ್ತೆಯರ ನಿರ್ಬಂಧ: ‘ಕರ್ನಾಟಕ ಪತ್ರಕರ್ತೆಯರ ಸಂಘ’ ಖಂಡನೆ

ಬೆಂಗಳೂರು: ನವದೆಹಲಿಯಲ್ಲಿರುವ ಆಫ್ಘನ್ ರಾಯಭಾರ ಕಚೇರಿಯಲ್ಲಿ ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಿಂದ ಪತ್ರಕರ್ತೆಯರನ್ನು ಹೊರಗಿಟ್ಟಿರುವ ಕ್ರಮವನ್ನು ಕರ್ನಾಟಕ ಪತ್ರಕರ್ತೆಯರ ಸಂಘವು ತೀವ್ರವಾಗಿ ಖಂಡಿಸುತ್ತದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪತ್ರಕರ್ತೆಯರ ಸಂಘದ ಪ್ರಧಾನ ಕಾರ್ಯದರ್ಶಿ ಮಂಜುಶ್ರೀ ಕಡಕೋಳ ಅವರು,  ಭಾರತದ ನೆಲದಲ್ಲಿ ನಡೆದಿರುವ ಈ ಉದ್ದೇಶಪೂರ್ವಕ ಲಿಂಗ ತಾರತಮ್ಯದ ಕೃತ್ಯವು ಅತ್ಯಂತ ಆತಂಕಕಾರಿಯಾಗಿದೆ. ಇದು ಸಮಾನತೆ ಮತ್ತು ತಾರತಮ್ಯವನ್ನು ನಿಷೇಧಿಸುವ ಭಾರತದ ಸಂವಿಧಾನದ ವಿಧಿ 14 … Continue reading ಆಫ್ಘನ್ ಸಚಿವರ ಸುದ್ದಿಗೋಷ್ಠಿಗೆ ಪತ್ರಕರ್ತೆಯರ ನಿರ್ಬಂಧ: ‘ಕರ್ನಾಟಕ ಪತ್ರಕರ್ತೆಯರ ಸಂಘ’ ಖಂಡನೆ