ಬೆಂಗಳೂರು : ಮಾಜಿ ಸಚಿವ ಯು.ಬಿ ಬಣಕಾರ್ ಆಗಮನದಿಂದ ಕಾಂಗ್ರೆಸ್ ಗೆ ಮತ್ತಷ್ಟು ಬಲ ಸಿಕ್ಕಂತಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಬಿ,ಸಿ ಪಾಟೀಲ್ ಆಪರೇಷನ್ ಕಮಲಕ್ಕೆ ಒಳಗಾದ ವ್ಯಕ್ತಿ, ದುಡ್ಡಿನ ಆಸೆಗೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದರು. ಆತನನ್ನು ಹಿರೇಕೆರೂರಿನಲ್ಲಿ ಸೋಲಿಸಬೇಕು, ಬಣಕಾರ್ ಆಗಮನದಿಂದ ಕಾಂಗ್ರೆಸ್ ಬಲ ಹೆಚ್ಚಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಬಿಜೆಪಿಗೆ ‘ಗುಡ್ ಬೈ’ ಹೇಳಿರುವ ಮಾಜಿ ಶಾಸಕ ಯು.ಬಿ ಬಣಕಾರ್ ( U.B Banakar) ಇಂದು (ನ.21) ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿ,ಕೆ ಶಿವಕುಮಾರ್ ಸೇರಿ ಹಿರಿಯ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಹಲವು ಬೆಂಬಲಿಗರ ಜೊತೆ ಕೆಪಿಸಿಸಿ ಕಚೇರಿಗೆ ಬಂದ ಬಣಕಾರ್ ಕಾಂಗ್ರೆಸ್ ಸೇರ್ಪಡೆಯಾದರು.ವಿಧಾನಪರಿಷತ್ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಬಿಜೆಪಿ ತೊರೆದ ಬಣಕಾರ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಂದಹಾಗೆ, ಯು,ಬಿ ಬಣಕಾರ್ ಸಚಿವ ಬಿ,ಸಿ ಪಾಟೀಲ್ ವಿರುದ್ಧ ಹಾವೇರಿ ಜಿಲ್ಲೆಯ ಹಿರೇಕೆರೂರಿನಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಹಳೆ ‘ಜನತಾದಳ’ ಸ್ಥಾಪಿಸಲು ಇಬ್ರಾಹಿಂ ಪ್ಲ್ಯಾನ್ : ಸಿಎಂ ಬೊಮ್ಮಾಯಿಗೂ ವಾಪಸ್ ಆಗಲು ಆಹ್ವಾನ