ಬೆಂಗಳೂರು: ಬನಶಂಕರಿ ವಿದ್ಯುತ್ ಚಿತಾಗಾರವನ್ನು ತುರ್ತು ನಿರ್ವಹಣೆ ಪ್ರಯುಕ್ತ ನಾಳೆಯಿಂದ 10 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ.
ದಕ್ಷಿಣ ವಲಯ ವ್ಯಾಪ್ತಿಯ ಬನಶಂಕರಿ ವಿದ್ಯುತ್ ಚಿತಾಗಾರದ ಎರಡು ಪರ್ನೆಸ್‌ಗಳ ಕಾಯಿಲ್‌ಗಳು ಹಾಗೂ ಬ್ರಿಕ್ಸ್‌ಗಳು ಹಾಳಾಗಿರುವುದರಿಂದ ತುರ್ತು ನಿರ್ವಹಣೆ ಕೆಲಸದ ಪ್ರಯುಕ್ತ ದಿನಾಂಕ: 29-04-2025 ರಿಂದ 08-05-2025 ವರೆಗೂ 10 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿದೆ.
ಮುಂದುವರಿದು, ಈ ಚಿತಾಗಾರಕ್ಕೆ ಮೃತ ದೇಹಗಳನ್ನು ದಹನ ಕ್ರಿಯೆಗಾಗಿ ತರುವ ಸಾರ್ವಜನಿಕರು ಸಮೀಪದಲ್ಲಿರುವ ಬೇರೆ ವಿದ್ಯುತ್ ಚಿತಾಗಾರವನ್ನು ಉಪಯೋಗಿಸಿಕೊಳ್ಳಬಹುದಾಗಿರುತ್ತದೆ ಎಂದು ವಿದ್ಯುತ್ ವಿಭಾಗದ ಕಾರ್ಯಪಾಲಕ ಅಭಿಯಂತರರು ತಿಳಿಸಿರುತ್ತಾರೆ.
BREAKING: ಭಾರತದಾದ್ಯಂತ ‘ಇನ್ಸ್ಟಾಗ್ರಾಮ್’ ಡೌನ್: ಬಳಕೆದಾರರು ಪರದಾಟ | Instagram Down
BIG NEWS : ಬೆಂಗಳೂರಿನ ‘ನಮ್ಮ ಮೆಟ್ರೋ’ದಲ್ಲಿ ಊಟ ಮಾಡಿದ ಮಹಿಳೆಗೆ 500 ರೂ.ದಂಡ : ‘BMRCL’ ಮಹತ್ವದ ಪ್ರಕಟಣೆ.!