ರಾಮನಗರ: ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಇದೀಗ ಪ್ರಕರಣ ಸಂಬಂಧ ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿಯಾಗಿರುವ ವೀರಶೈವ ಲಿಂಗಾಯತ ಮುಖಂಡನಿಗೆ ನೋಟಿಸ್ ನೀಡಲಾಗಿದೆ.
BIGG NEWS: ರಾಜ್ಯದಲ್ಲಿ ಇನ್ನೂ 5 ದಿನ ಗುಡುಗು ಸಹಿತ ಭಾರಿ ಮಳೆ; ಬೆಂಗಳುರಿನಲ್ಲಿ ಮೋಡ ಕವಿದ ವಾತಾವರಣ| Rain alert
ಡೆತ್ನೋಟ್ನಲ್ಲಿ ಸಚ್ಚಿದಾನಂದ ಮೂರ್ತಿ ಹೆಸರು ಉಲ್ಲೇಖ ಆಗಿದ್ದರಿಂದ ಮಾಗಡಿ ಪೋಲಿಸರು ನೋಟಿಸ್ ನೀಡಿದ್ದಾರೆ. ಸಚ್ಚಿದಾನಂದ ಮೂರ್ತಿಯಿಂದಲೂ ಅಪಪ್ರಚಾರ ಎಂದು ಬಸವಲಿಂಗ ಶ್ರೀಗಳು ಬರೆದಿದ್ದರು. ಹೆಸರು ಪ್ರಸ್ತಾಪ ಹಿನ್ನಲೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ. ಪ್ರಕರಣ ಸಂಬಂಧ ಮಾಹಿತಿ ಕಲೆಹಾಕುವ ನಿಟ್ಟನಲ್ಲಿ ವಿಚಾರಣೆ ನಡೆಸಲಾಗುತ್ತದೆ.
BIGG NEWS: ರಾಜ್ಯದಲ್ಲಿ ಇನ್ನೂ 5 ದಿನ ಗುಡುಗು ಸಹಿತ ಭಾರಿ ಮಳೆ; ಬೆಂಗಳುರಿನಲ್ಲಿ ಮೋಡ ಕವಿದ ವಾತಾವರಣ| Rain alert
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ಮಾಗಡಿ ಪೊಲೀಸರು ಚುರುಕುಗೊಳಿಸಿದ್ದಾರೆ.ಡಾ. ಮೃತ್ಯಂಜಯಶ್ರೀ, ನೀಲಾಂಬಿಕೆ , ಮಹಾದೇವಯ್ಯಗೆ ಪೊಲೀಸರು ಗ್ರಿಲ್ ಮಾಡುತ್ತಿದ್ದಾರೆ. ಆರೋಪಿಗಳ ಮೊಬೈಲ್ ಪರಿಶೀಲನೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ವಿಡಿಯೋ ರೆಕಾರ್ಡ್ ಆಗಿರುವುದರ ಬಗ್ಗೆ ಮಾಹಿತಿ ಸಿಕ್ಕಿಲ್ಲ . ರೆಕಾರ್ಡ್ ಆಗಿರುವ ಮೂಲ ಮೊಬೈಲ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆ ಮೊಬೈಲ್ ಪತ್ತೆಯಾದ್ರೆ ಕೇಸ್ ಗೆ ಪ್ರಮುಖ ಎವಿಡೆನ್ಸ್ ಪತ್ತೆಯಾಗುತ್ತದೆ. ಇನ್ನು ಪೊಲೀಸರ ಮೊಬೈಲ್ ಪರಿಶೀಲನೆ ವೇಳೆ ಆರೋಪಿಗಳ ಕಳ್ಳಾಟ ಬಯಲು ಆಗಿದೆ. ಸುಮಾರು 6 ತಿಂಗಳ ವಾಟ್ಸಾಪ್ ಚಾಟ್ ಸಂಪೂರ್ಣ ಡಿಲೀಟ್ ಆಗಿದೆ. ವಾಟ್ಸಾಪ್ ಚಾಟ್ ಡಿಲೀಟ್ ಅನ್ನು ಆರೋಪಿಗಳು ಮಾಡಿದ್ದಾರೆ.