ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಬಂಡೀಪುರಕ್ಕೆ ಹೊಸ ವರ್ಷದ ಮುನ್ನಾ ದಿನ ಹಾಗೂ ಹೊಸ ವರ್ಷದಂದು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ವರ್ಷಾಂತ್ಯದ ಹಿನ್ನಲೆಯಲ್ಲಿ ಪ್ರಸಿದ್ಧ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಬಂಡೀಪುರದಲ್ಲಿ ಪ್ರವಾಸಿಗರ ದಂಡೇ ನೆರೆದು, ಮೋಜು-ಮಸ್ತಿ ಮಾಡುವ ಕಾರಣ, ವನ್ಯಜೀವಿಗಳ ಸಹಜ ಜೀವನಕ್ಕೆ ಧಕ್ಕೆಯಾಗಲಿದೆ ಎಂಬುದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಡಿಸೆಂಬರ್ 31 ಮತ್ತು ಜನವರಿ 1ರಂದು ಬಂಡೀಪುರದ ಅರಣ್ಯ ಇಲಾಖೆಯ ವಸತಿ ಗೃಹಗಳು ಲಭ್ಯವಿರುವುದಿಲ್ಲ. ಹೀಗಾಗಿ ಅರಣ್ಯ ಇಲಾಖೆಗೆ ಸೇರಿದ ವಸತಿಗೃಹಗಳು, ಕಾಟೇಜ್ ಗಳಲ್ಲಿ ಪ್ರತ್ಯೇಕವಾಗಿ ಈ ಎರಡು ದಿನ ವಾಸ್ತವ್ಯಕ್ಕೆ ಅವಕಾಶವಿರುವುದಿಲ್ಲ.
ಅಂದಹಾಗೇ ಪ್ರತಿ ವರ್ಷವೂ ವನ್ಯ ಜೀವಿಗಳ ಸಹಜ ಜೀವನಕ್ಕೆ ತೊಂದರೆ ಆಗುವ ಕಾರಣಕ್ಕೆ ನಿರ್ಬಂಧ ಹೇರಲಾಗುತ್ತಿದೆ. ಅದರಂತೆ ಈ ಬಾರಿಯೂ ಹೊಸ ವರ್ಷಾಚರಣೆಯಂದು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶಿಸಿದೆ.
RR ನಗರ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಕುಸುಮಾಗೆ ಈ ಸವಾಲ್ ಹಾಕಿದ ‘ಶಾಸಕ ಮುನಿರತ್ನ’
BREAKING: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಗೌರವಾರ್ಥ ಸ್ಮಾರಕ ನಿರ್ಮಿಸಲು ಕೇಂದ್ರ ಸರ್ಕಾರ ನಿರ್ಧಾರ