ಬೆಂಗಳೂರು: ದೇಶದಲ್ಲಿ ಮೃಗಗಳಿಗೆ ವಿಚಿತ್ರ ಸೋಂಕಿನ ಭೀತಿ ಎದುರಾಗಿದ್ದು, ಮೃಗಾಲಯಲದಲ್ಲಿರುವ ಹುಲಿಗಳು ಸಾವನ್ನಪ್ಪುತ್ತಿವೆ ಎಂದು ಹೇಳಲಾಗಿದೆ.
ಅದೇ ರೀತಿ ಬೆಂಗಳೂರಿನಲ್ಲಿರುವ ಪ್ರಸಿದ್ಧ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಹುಲಿಗಳು ಸಾವನ್ನಪ್ಪಿವೆ ಎಂದು ವರದಿಯಾಗಿದೆ. ಮೃಗಾಲಯದಲ್ಲಿನ ಬೆಂಗಾಲ್ ಟೈಗರ್ಗಳಿಗೆ ವಿಚಿತ್ರ ಸೋಂಕು ತಗುಲಿದ್ದು, ಬ್ಯಾರೆಕ್ ಒಳಗಡೆ ಹರಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ಇತರ ಹುಲಿಗಳಿಗೂ ಸೋಂಕು ಹರಡುವ ಭೀತಿ ಎದುರಾಗಿದೆ.
ಇನ್ನು ವಿದೇಶದಿಂದ ಭಾರತಕ್ಕೆ ಪ್ರಾಣಿಗಳನ್ನ ತರಲಾಗುತ್ತಿದೆ.ಇದಕ್ಕೆ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಹುಲಿ ಸಾವುಗಳೇ ಸಾಕ್ಷಿ ಎಂಬಂತಿದೆ. ಮೂರು ವರ್ಷ ಕಿರಣ್, ಐದು ವರ್ಷದ ಶಿವು ಸೇರಿದಂತೆ ಒಟ್ಟು ಮೂರು ಹುಲಿಗಳು ಕಳೆದ ಮೂರು ತಿಂಗಳಲ್ಲಿ ಸಾವನ್ನಪ್ಪಿವೆ.
ಅಂದಹಾಗೆ ಹುಲಿಗಳ ಆರೋಗ್ಯಕ್ಕಾಗಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಲಾಗುತ್ತದೆ.ಹೀಗಾಗಿ ಹಲವು ಗಣ್ಯ ವ್ಯಕ್ತಿಗಳು ಕೆಲವೊಂದು ಹುಲಿಗಳನ್ನು ದತ್ತು ತೆಗೆದುಕೊಂಡಿದ್ದಾರೆ.