ಬೆಂಗಳೂರು: ನಾಡಿನೆಲ್ಲೆಡೆ ಜನರು ಸಡಗರದಿಂದ ದೀಪಾವಳಿ ಆಚರಿಸಿದ್ದಾರೆ. ಆದರೆ ಹಬ್ಬದ ಖುಷಿಯಲ್ಲಿ ಪಟಾಕಿ ಹೊಡೆಯುತ್ತಾ ಮೈ ಮರೆತ ಕೆಲವರು ಆಸ್ಪತ್ರೆ ಸೇರಿದ್ದಾರೆ, ಇನ್ನೂ ಕೆಲವರು ಕಣ್ಣಿನ ದೃಷ್ಟಿಯನ್ನೇ ಕಳೆದುಕೊಂಡಿದ್ದಾರೆ.
ದೀಪಾವಳಿಯಲ್ಲಿ ಬೆಂಗಳೂರಿನಲ್ಲಿ 93 ಕ್ಕೂ ಹೆಚ್ಚು ಮಂದಿ ಆಸ್ಪತ್ರೆ ದಾಖಲಾಗಿದ್ದಾರೆ. ಪಟಾಕಿ ಹೊಡೆಯಲು ಅವಘಡ ಮಾಡಿಕೊಂಡಿದ್ದು, ಬೆಂಗಳೂರಿನಲ್ಲಿ 93 ಕ್ಕೂ ಹೆಚ್ಚು ಮಂದಿ ಪಟಾಕಿ ಸಿಡಿತದಿಂದ ಗಾಯಗೊಂಡಿದ್ದಾರೆ.
ಬೆಂಗಳೂರಿನ ಹಲವು ಆಸ್ಪತ್ರೆಗಳಲ್ಲಿ 93 ಕ್ಕೂ ಹೆಚ್ಚು ಕೇಸ್ ದಾಖಲಾಗಿದ್ದು, ಇದರಲ್ಲಿ ಬಾಲಕರ ಸಂಖ್ಯೆಯೇ ಹೆಚ್ಚಾಗಿದೆ. ಕೆಲವರಿಗೆ ಗಂಭೀರ ಗಾಯಗಳಾದರೆ, ಕೆಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಿಂಟೋ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ವ್ತವಸ್ಥೆ ಮಾಡಲಾಗಿದ್ದು, ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಎಲ್ಲೆಲ್ಲಿ ಎಷ್ಟು ಕೇಸ್..?
ಬೆಂಗಳೂರಿನಲ್ಲಿ 3 ದಿನದಲ್ಲಿ 93 ಕ್ಕೂ ಹೆಚ್ಚು ಪ್ರಕರಣ
ಮಿಂಟೋ ಆಸ್ಪತ್ರೆಯಲ್ಲಿ 19 ಪ್ರಕರಣ
ನಾರಾಯಣ ನೇತ್ರಾಲಯದಲ್ಲಿ 40 ಪ್ರಕರಣ
ನೇತ್ರದಾಮ ಕಣ್ಣಿನ ಆಸ್ಪತ್ರೆಯಲ್ಲಿ 20 ಕೇಸ್
ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 13 ಪ್ರಕರಣ
ಮೋದಿ ಕಣ್ಣಿನ ಆಸ್ಪತ್ರೆಯಲ್ಲಿ 12 ಪ್ರಕರಣ
ಪಟಾಕಿ ಸಿಡಿತದಿಂದ ಹಾನಿಗೊಂಡವರು ಮಿಂಟೋ ಆಸ್ಪತ್ರೆ, ನಾರಾಯಣ ನೇತ್ರಾಲಯ, ನೇತ್ರದಾಮ, ಶಂಕರ್ ಕಣ್ಣಿನ ಆಸ್ಪತ್ರೆ, ಅಸ್ಟರ್ ಸಿಎಂಐ, ಮೋದಿ ಕಣ್ಣಿನ ಆಸ್ಪತ್ರೆ, ವಿಕ್ಟೋರಿಯಾ ಸುಟ್ಟ ಗಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಪ್ರತಿ ವರ್ಷ ದೀಪಾವಳಿ ವೇಳೆ ಪಟಾಕಿ ಸಿಡಿಸಿ ಜನರು ಸಂಭ್ರಮಿಸುತ್ತಾರೆ. ಪಟಾಕಿ ಹೊಡೆಯುವ ವೇಳೆ ಅದೆಷ್ಟೋ ಮಂದಿ ಗಾಯಗೊಳ್ಳುತ್ತಾರೆ.
ಅದರಲ್ಲಿಯೂ ಮಕ್ಕಳೇ ಹೆಚ್ಚಾಗಿ ಹಾನಿಗೊಳಗಾಗುತ್ತಾರೆ. ಅದರಂತೆ ಈ ಬಾರಿ ಕೂಡ 5 ರಿಂದ 18 ವರ್ಷದ ಒಳಗಿನ ಮಕ್ಕಳೇ ಪಟಾಕಿ ಸಿಡಿತಕ್ಕೆ ಹೆಚ್ಚಾಗಿ ಗಾಯಗೊಂಡಿದ್ದಾರೆ. ಸದ್ಯ ಬೆಳಕು ಚೆಲ್ಲಾಬೇಕಿದ್ದ ದೀಪಾವಳಿ, ಈ ಮಕ್ಕಳ ಬಾಳಲ್ಲಿ ಕತ್ತಲೆ ತಂದಿದೆ.