ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ದುರಂತ ಉಂಟಾಗಿ 11 ಮಂದಿ ಸಾವನ್ನಪ್ಪಿದ್ದರು. ಈ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ನೀಡುವುದಾಗಿ ಅಂದೇ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದರು. ಇಂತಹ ಪರಿಹಾರದ ಮೊತ್ತವನ್ನು ಪರಿಷ್ಕರಿಸಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಲಾ 25 ಲಕ್ಷ ನೀಡುವುದಾಗಿ ಘೋಷಿಸಿದ್ದಾರೆ.
ಇಂದು ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ಈ ಮೊದಲು ತಲಾ ಹತ್ತು ಲಕ್ಷ ರೂ.ಗಳ ಪರಿಹಾರವನ್ನು ಸರ್ಕಾರ ಘೋಷಿಸಿತ್ತು. ಇದೀಗ ಈ ಮೊತ್ತವನ್ನು ತಲಾ 25 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಮೃತ 11 ಕುಟುಂಬಸ್ಥರಿಗೂ ರಾಜ್ಯ ಸರ್ಕಾರದಿಂದ ತಲಾ 25 ಲಕ್ಷ ಪರಿಹಾರವನ್ನು ವಿತರಿಸಲಾಗುತ್ತಿದೆ.
BREAKING: ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಚಿಕ್ಕಪ್ಪ
ಕಾಲ್ತುಳಿತ ದುರಂತ: ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿ ಈಗ ಎಲ್ಲಿದ್ದಾರೆ?- ಶೋಭಾ ಕರಂದ್ಲಾಜೆ ಪ್ರಶ್ನೆ