ಬೆಂಗಳೂರು: ನಗರದಲ್ಲಿ ಹಿಟ್ ಅಂಡ್ ರನ್ ಪ್ರಕರಣ ಸಂಬಂಧ ಸಂಚಾರ ಪೊಲೀಸರು ಆರೋಪಿ ಶ್ರೀಕಾಂತ್ ಶರ್ಮಾ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಶ್ರೀಕಾಂತ್ ಶರ್ಮಾ ಅನಿವಾಸಿ ಭಾರತೀಯ ಆಗಿದ್ದಾರೆ.
ಬೆಂಗಳೂರಲ್ಲಿ ನಡೆದಿದ್ದಂತ ಹಿಟ್ ಅಂಡ್ ರನ್ ಪ್ರಕರಣ ಸಂಬಂಧ ಅನಿವಾಸಿ ಭಾರತೀಯ ಆಗಿರುವಂತ ಶ್ರೀಕಾಂತ್ ಶರ್ಮಾ ಎಂಬಾತನನ್ನು ವಿಜಯನಗರ ಸಂಚಾರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಶ್ರೀಕಾಂತ್ ಶರ್ಮಾ ರಾಜಾಜಿನಗರದಲ್ಲಿ ಸ್ವಂತ ಮನೆಯನ್ನು ಹೊಂದಿದ್ದಾರೆ. ಲಂಡನ್ ನಲ್ಲಿ ಸ್ವಂತ ಕಂಪನಿ ಹೊಂದಿರುವಂತ ಅವರು, ಆಗಾಗ ಬೆಂಗಳೂರಿಗೆ ಬಂದು ಹೋಗುತ್ತಿದ್ದರು.
ಇಂತಹ ಅನಿವಾಸಿ ಭಾರತೀಯ ಶ್ರೀಕಾಂತ್ ಶರ್ಮಾ ಅವರು ಹಿಟ್ ಅಂಡ್ ರನ್ ಮಾಡಿದ್ದರ ಬಗ್ಗೆ ಬೆಂಗಳೂರಿನ ವಿಜಯನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಇಂದು ಅವರನ್ನು ಬಂಧಿಸಲಾಗಿದೆ.
ಪ್ರಜ್ವಲ್ ರೇವಣ್ಣಗೆ ಬಿಗ್‌ಶಾಕ್: ಪಾಸ್ ಪೋರ್ಟ್’ ರದ್ದತಿ ಪ್ರಕ್ರಿಯೆ ಆರಂಭ, ಶೀಘ್ರದಲ್ಲಿ ಬಂಧನ!
ರಾಜ್ಯದ ರೈತರಿಗೆ ‘ನೆಮ್ಮದಿ ಸುದ್ದಿ’ ; ಬರ ಪರಿಹಾರದ ಮೊತ್ತ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಸಿಎಂ ಸೂಚನೆ