ಬೆಂಗಳೂರು : ವಾಣಿಜ್ಯ ಸಿಲಿಂಡರ್ ಇಲ್ಲದೆ ಬೆಂಗಳೂರಿನಲ್ಲಿ ಹೋಟೆಲ್ ಮಾಲೀಕರು ಇದೀಗ ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ವಾಣಿಜ್ಯ ಸಿಲಿಂಡರ್ ಗಳನ್ನು ಪೂರೈಕೆ ಮಾಡಿ ಎಂದು ಪತ್ರ ಬರೆದು ಮನವಿ ಮಾಡಿದ್ದಾರೆ.
ಹೌದು ಇರಾನ್ ಇಸ್ರೇಲ್ ಹಾಗೂ ಅಮೆರಿಕ ಯುದ್ಧದ ಹಿನ್ನೆಲೆಯಲ್ಲಿ ಇದೀಗ ಭಾರತದಲ್ಲಿ ಗ್ಯಾಸ್ ಸಿಲಿಂಡರ್ ಗಳ ಕೊರತೆ ಹೆಚ್ಚಾಗಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ದೊಡ್ಡ ದೊಡ್ಡ ಹೋಟೆಲ್ಗಳು ವಾಣಿಜ್ಯ ಸಿಲಿಂಡರ್ ಇಲ್ಲದೆ ಬಂದ್ ಆಗಿವೆ. ಇನ್ನು ರಾಜ್ಯ ಸರ್ಕಾರ ಕೂಡ ಒಂದು ಸಾವಿರ ಸಿಲಿಂಡರ್ ಪೂರೈಕೆ ಮಾಡಲಾಗುತ್ತೆ ಎಂದು ಹೇಳಿದೆ.
ಆದರೆ ಬೆಂಗಳೂರಲ್ಲಿರುವ 40,000ಕ್ಕೂ ಹೆಚ್ಚು ಹೋಟಲ್ ಗಳಿಗೆ ಕೇವಲ ಒಂದು ಸಾವಿರ ಸಿಲಿಂಡರ್ ಸಾಕಾಗಲ್ಲ. ಹಾಗಾಗಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಅವರು ಇದೀಗ ಪ್ರಧಾನಿ ಮೋದಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಇನ್ನು ಹಲವು ಜಿಲ್ಲೆಗಳಲ್ಲಿ ಗ್ಯಾಸ್ ಸಿಲಿಂಡರ್ ಸಿಗದೇ ಜನ ಪರದಾಡುತ್ತಿದ್ದಾರೆ.








