ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಫಾರ್ಮ್ ಹೌಸ್‌ನ ರೇವ್ ಪಾರ್ಟಿ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾ ಸೇರಿದಂತೆ 86 ಜನರ ರಕ್ತ ಪರೀಕ್ಷೆಯಲ್ಲಿ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ.
ಜಿ.ಆರ್. ಫಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ 59ಪುರಷುರು ಹಾಗೂ 27ಮಹಿಳೆಯರ ರಕ್ತ ಪರೀಕ್ಷೆ ನಡೆಸಲಾಗಿದ್ದು, ರಕ್ತ ಪರೀಕ್ಷೆಯಲ್ಲಿ ಎಲ್ಲರೂ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ.
ಎಲೆಕ್ಟ್ರಾನಿಕ್ ಸಮೀಪದ ಜಿ.ಆರ್.ಫಾರ್ಮ್ ಹೌಸ್‌ನಲ್ಲಿ ನಡೆದಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ದಾಳಿ ನಡೆಸಿತ್ತು. ಆದರೆ ಈ ಫಾರ್ಮ್ ಹೌಸ್ ಹೆಬ್ಬಗೋಡಿ ಠಾಣಾ ಸಹರದ್ದಿಗೆ ಸೇರಿದ ಕಾರಣ ದಾಳಿ ಬಳಿಕ ಪ್ರಕರಣವನ್ನು ಆ ಠಾಣೆಗೆ ಸಿಸಿಬಿ ವರ್ಗಾವಣೆ ಮಾಡಿತ್ತು. ಈಗ ಪ್ರಕರಣದ ಮುಂದಿನ ತನಿಖೆ ಹೊಣೆಗಾರಿಕೆ ಸಿಸಿಬಿ ಹೆಗಲಿಗೆ ಬಿದ್ದಿದೆ.