ಬೆಂಗಳೂರು : ಬೆಂಗಳೂರು ವಿವಿ’ ಹೊರಡಿಸಿರುವ ಸುತ್ತೋಲೆಯೊಂದು ಬೆಂಗಳೂರು ವಿವಿ ವಿದ್ಯಾರ್ಥಿಗಳ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಹೌದು. ಪ್ರತಿಭಟನೆಗೆ ಅವಕಾಶವಿಲ್ಲವೆಂದು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಹೊರಡಿಸಿರುವ ಸುತ್ತೋಲೆಗೆ ವಿದ್ಯಾರ್ಥಿ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದೆ. ವಿದ್ಯಾರ್ಥಿ ಸಂಘಟನೆಗಳಾದ ಎಬಿವಿಪಿ, ಎನ್ಎಸ್ಯುಐ, ಎಸ್ಎಫ್ಐ ಮತ್ತು ಸಿಎಫ್ಐ ಸೇರಿದಂತೆ ಹಲವು ವಿದ್ಯಾರ್ಥಿ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದೆ.
ಬೆಂಗಳೂರು ವಿವಿ ಆವರಣದಲ್ಲಿ ಯಾರೂ ಕೂಡ ಪ್ರತಿಭಟನೆ ನಡೆಸುವ ಹಾಗಿಲ್ಲ , ರಾಜಕೀಯ ಪ್ರೇರಿತ ಸಂಘಟನೆಗಳಿಗೆ ಅವಕಾಶ ಇಲ್ಲ ಇದಕ್ಕೆ ಆವರಣದಲ್ಲಿ ಅವಕಾಶವಿಲ್ಲವೆಂದು ಬೆಂಗಳೂರು ವಿವಿ ಖಡಕ್ ಸುತ್ತೋಲೆ ಹೊರಡಿಸಿತ್ತು ಇದೀಗ ಬೆಂಗಳೂರು ವಿವಿ ಸೂಚನೆಯನ್ನು ತಕ್ಷಣ ಹಿಂಪಡೆಯಬೇಕೆಂದು ವಿದ್ಯಾರ್ಥಿ ಸಂಘಟನೆಗಳು ಒತ್ತಾಯಿಸಿವೆ. ಬೆಂಗಳೂರು ವಿವಿಯಲ್ಲಿ ಈಗಾಗಲೇ ಹಲವು ಸಮಸ್ಯೆಗಳಿದೆ. ಮೊದಲು ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡಬೇಕು. ಅದು ಬಿಟ್ಟು ಇವರು ಪ್ರತಿಭಟನೆ ಹತ್ತಿಕ್ಕಲು ಹೊರಟಿದ್ದಾರೆ. ನಮ್ಮ ಪ್ರತಿಭಟನೆಗಳನ್ನು ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ. ಸಮಸ್ಯೆಗಳನ್ನು ಪರಿಹರಿಸದಿದ್ದರೆ ನಾವು ಪ್ರತಿಭಟನೆ ನಡೆಸುತ್ತೇವೆ ಎಂದು ವಿದ್ಯಾರ್ಥಿ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದೆ.
ಆರೋಗ್ಯ ಸಚಿವ ಸುಧಾಕರ್ ಸಿಎಂಗಿಂತ ದೊಡ್ಡವರಾ..? : ಹೀಗೆಂದ ಶಾಸಕರು ಯಾರು ಗೊತ್ತಾ..?