ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ( Bangaluru University ) ಖಾಲಿ ಇರುವಂತ 13 ಸ್ನಾತಕ, ಸ್ನಾತಕೋತ್ತರ ವಿಭಾಗಗಳಲ್ಲಿನ ಅತಿಥಿ ಉಪನ್ಯಾಸಕರ ಹುದ್ದೆಗಾಗಿ ( Guest Lecturer Jobs ) ಅರ್ಜಿಯನ್ನು ಆಹ್ವಾನಿಸಲಾಗಿದೆ.
BREAKING NEWS : ಬೆಂಗಳೂರಿನಲ್ಲಿ ದೀಪಾವಳಿ ಹಬ್ಬದ ದಿನವೇ ದುರಂತ : ಫ್ಲೈಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವು
ಈ ಕುರಿತಂತೆ ಬೆಂಗಳೂರು ವಿವಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದ್ದು, 2022-23ನೇ ಸಾಲಿಗೆ ವಿವಿಯಲ್ಲಿ ಖಾಲಿ ಇರುವಂತ 13 ಅತಿಥಿ ಉಪನ್ಯಾಸಕರ ಹುದ್ದೆಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದೆ.
APPS 16 : ಈ 16 ಅಪ್ಲಿಕೇಶನ್ ನಿಮ್ಮ ಮೊಬೈಲ್ನಲ್ಲಿ ಇದ್ದರೇ ಕೂಡಲೇ ಡಿಲೀಟ್ ಮಾಡಿ
ಅಂದಹಾಗೇ ಪ್ರಾಣಿಶಾಸ್ತ್ರ, ಕನ್ನಡ, ಸಮಾಜಕಾರ್ಯ, ಸಮಾಜಶಾಸ್ತ್ರ, ಇಂಗ್ಲೀಷ್, ಗಣಕವಿಜ್ಞಾನ, ಸಸ್ಯ ಶಾಸ್ತ್ರ, ರಾಜ್ಯಶಾಸ್ತ್ರ, ಹಿಂದಿ, ಅರ್ಥಶಾಸ್ತ್ರ, ಸಂವಹನ ಮತ್ತು ಪತ್ರಿಕೋದ್ಯಮ, ರಾಜ್ಯಶಾಸ್ತ್ರ ಹಾಗೂ ಇತಿಹಾಸ ವಿಷಯಗಳ ಉಪನ್ಯಾಸಕರ ಹುದ್ದೆಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಬೆಂಗಳೂರು ವಿಶ್ವವಿದ್ಯಾಲಯದ ವೆಬ್ ಸೈಟ್ www.bangaloreuniversity.ac.in ಜಾಲತಾಣಕ್ಕೆ ಭೇಟಿ ನೀಡಿ, ಅರ್ಜಿಯನ್ನು ಆಕ್ಟೋಬರ್ 31ರ ಒಳಗಾಗಿ ಸಲ್ಲಿಸುವಂತೆ ತಿಳಿಸಿದೆ.