ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಸಲುವಾಗಿ, ರಸ್ತೆ ಅಕ್ಕ ಪಕ್ಕದಲ್ಲಿ ಕಸ ಎಸೆಯುವವರನ್ನು ಗುರುತಿಸಿ, ದಂಡ ವಿಧಿಸಿ , ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ರವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ವಲಯ ಮಟ್ಟದಲ್ಲಿ ವ್ಯವಸ್ಥಿತ ಸ್ವಚ್ಛತಾ ಕಾರ್ಯ ನಿರ್ವಹಣೆ ಜಾರಿಯ ಉದ್ದೇಶದಿಂದ, ಇಂದು ವಾರ್ಡ್ 62 – ರಾಮಸ್ವಾಮಿ ಪಾಳ್ಯದಲ್ಲಿ ಪರಿಶೀಲನೆ ನಡೆಸಿದ ವೇಳೆ, ಅವರು ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಆಟೋ ಟಿಪ್ಪರ್ ಮಸ್ಟರಿಂಗ್ ಪಾಯಿಂಟ್ ಪರಿಶೀಲನೆ:
ಚಿನ್ನಪ್ಪ ಗಾರ್ಡನ್ ಮುಖ್ಯರಸ್ತೆ ಬಳಿಯ ಆಟೋ ಟಿಪ್ಪರ್ ಮಸ್ಟರಿಂಗ್ ಪಾಯಿಂಟ್ ಪರಿಶೀಲಿಸಿದ ವಲಯ ಆಯುಕ್ತರು, ಆಟೋ ಟಿಪ್ಪರ್ ಚಾಲಕರ ಹಾಜರಾತಿ ಹಾಗೂ ಸಮಯ ಪಾಲನೆ ಪರಿಶೀಲನೆ ನಡೆಸಿ, ಎಲ್ಲಾ ಆಟೋ ಟಿಪ್ಪರ್ ಗಳು ಸ್ಥಳದಲ್ಲಿ ಹಾಜರಿರುವುದನ್ನು ಗಮನಿಸಿದರು.
ಮುಂದುವರೆದಂತೆ, ಆಟೋ ಟಿಪ್ಪರ್ ಮಸ್ಟರಿಂಗ್ ಪಾಯಿಂಟ್ ಮುಂಭಾಗದಲ್ಲಿ ತ್ಯಾಜ್ಯ, ಕಟ್ಟಡ ಭಗ್ನಾವಶೇಷಗಳು ಜಮೆಯಾಗಿದ್ದು, ಅವುಗಳನ್ನು ತೆರವುಗೊಳಿಸಿ, ಸ್ಥಳದಲ್ಲಿ ಮೆಟಲ್ ಶೀಟ್ ಅಳವಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪೌರ ಕಾರ್ಮಿಕರ ಮಸ್ಟರಿಂಗ್ ಪಾಯಿಂಟ್ ಪರಿಶೀಲನೆ:
ಚಿನ್ನಪ್ಪ ಗಾರ್ಡನ್, 4ನೇ ಮುಖ್ಯರಸ್ತೆಯಲ್ಲಿರುವ ಪೌರ ಕಾರ್ಮಿಕರ ಮಸ್ಟರಿಂಗ್ ಜಾಗಕ್ಕೆ ಭೇಟಿ ನೀಡಿ, ಪೌರ ಕಾರ್ಮಿಕರ ಹಾಜರಾತಿ ಹಾಗೂ ಸಮಯ ಪಾಲನೆಯನ್ನು ಪರಿಶೀಲಿಸಿ, ನಿಗದಿತ ರಸ್ತೆಗಳ ಸ್ವಚ್ಛತಾ ಕಾರ್ಯವನ್ನು ಕಡ್ಡಾಯವಾಗಿ ನಡೆಸುವಂತೆ, ಕಡ್ಡಾಯವಾಗಿ ಸುರಕ್ಷತಾ ಕೈಗವಸುಗಳನ್ನು ಧರಿಸಲು ಹಾಗೂ ಕಡ್ಡಾಯವಾಗಿ ಸಮಯಕ್ಕೆ ಸರಿಯಾಗಿ ಮಸ್ಟರಿಂಗ್ ಜಾಗದಲ್ಲಿ ಹಾಜರಿರುವಂತೆ ವಲಯ ಆಯುಕ್ತರು ಪೌರಕಾರ್ಮಿಕರಿಗೆ ಸೂಚನೆ ನೀಡಿದರು.
ನಿಗದಿತ ಸಮಯದಲ್ಲಿ ಮನೆಗಳಿಂದ ತ್ಯಾಜ್ಯ ಸಂಗ್ರಹಿಸಲು ಸೂಚನೆ:
ಎಂ.ಆರ್.ಎಸ್ ಪಾಳ್ಯದ ಮುಂಭಾಗದಲ್ಲಿರುವ ಅಯ್ಯಪ್ಪ ಶಾಲೆಯ ಬಳಿ ಮನೆಮನೆ ತ್ಯಾಜ್ಯ ಸಂಗ್ರಹಣೆಯ ಕಾರ್ಯ ನಿರ್ವಹಣೆ ಪರಿಶೀಲನೆ ನಡೆಸಿ, ನಿಗದಿತ ಸಮಯದಲ್ಲಿ ಕಡ್ಡಾಯವಾಗಿ ತ್ಯಾಜ್ಯ ಸಂಗ್ರಹಿಸಲು ಆಟೋ ಟಿಪ್ಪರ್ ಚಾಲಕರಿಗೆ ಸೂಚನೆ ನೀಡಿದರು.
ಈ ವೇಳೆ ಎಜಿಎಂ ಅಭಿಲಾಷ್, ವಿಭಾಗೀಯ ಮಾರ್ಷಲ್ ಮೇಲ್ವಿಚಾರಕರು, ವಾರ್ಡ್ ಮಾರ್ಷಲ್, ಕಿರಿಯ ಆರೋಗ್ಯ ಪರಿವೀಕ್ಷಕರು, ಪೌರಕಾರ್ಮಿಕರು ಸೇರಿದಂತೆ ಇತರೆ ಸಂಬಂಧಪಟ್ಟ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಆ.3ಕ್ಕೆ ಸಾಗರದಲ್ಲಿ ‘ಎಸ್.ವೆಂಕಟರಮಣ ಆಚಾರ್ ಪ್ರಾಮಾಣಿಕ ಸರ್ಕಾರಿ ಸೇವಾ ಪ್ರಶಸ್ತಿ’ ಪ್ರದಾನ: ಮ.ಸ.ನಂಜುಂಡಸ್ವಾಮಿ
BREAKING: ಅಲಾಸ್ಕಾ, ಹವಾಯಿಯಲ್ಲಿ ಸುನಾಮಿ: 10 ಅಡಿ ಎತ್ತರದ ಅಲೆಗಳ ಅಬ್ಬರ !