ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ಕಡಿತ ಘೋಷಿಸಿದೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಬೆಂಗಳೂರು ಇಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತವನ್ನು ಘೋಷಿಸಿವೆ.
ಜೂನ್ 12 ಬುಧವಾರ- ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಜೂ.12ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಶ್ರೀನಗರ, ಹೊಸಕೆರೆಹಳ್ಳಿ, ವೀರಭದ್ರನಗರ, ನ್ಯೂ ಟಿಂಬರ್ ಯಾರ್ಡ್ (ಎನ್ ಟಿವೈ) ಲೇಔಟ್, ತ್ಯಾಗರಾಜನಗರ, ಬಿಎಸ್ ಕೆ 3ನೇ ಹಂತ, ಕತ್ರಿಗುಪ್ಪೆ, ಗಿರಿನಗರ 4ನೇ ಹಂತ, ವಿಲ್ಸನ್ ಗಾರ್ಡನ್, ಜೆ.ಸಿ.ರಸ್ತೆ, ಶಾಂತಿನಗರ, ರಿಚ್ಮಂಡ್ ವೃತ್ತ, ರೆಸಿಡೆನ್ಸಿ ರಸ್ತೆ, ಲಾಲ್ ಬಾಗ್ ರಸ್ತೆ, ಸಂಪಂಗಿರಾಮ ನಗರ, ಕೆ.ಎಚ್.ರಸ್ತೆ, ಸುಬ್ಬಯ್ಯ ವೃತ್ತ, ಸುಧಾಮನಗರ.