ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಜೂನ್ 13 ರ ನಾಳೆ ವಿದ್ಯುತ್ ಕಡಿತ ಘೋಷಿಸಿದೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಬೆಂಗಳೂರು ಬೆಳಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತವನ್ನು ಘೋಷಿಸಿವೆ.
ಜೂನ್ 13 ಗುರುವಾರ- ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಜೂ.13 ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ, ರಾಜಾಜಿನಗರ 1ನೇ ಬ್ಲಾಕ್ 6ನೇ ಬ್ಲಾಕ್ ಗುಬ್ಬಣ್ಣ ಇಂಡಸ್ಟ್ರೀಯಲ್ ಏರಿಯಾ, ಡಾ| ಮೋದಿ ಹಾಸ್ಪಿಟಲ್ ರೋಡ್, ಮಂಜುನಾಥನಗರ, ಶಿವನಗರ, ಅಗ್ರಹಾರ ದಾಸರಹಳ್ಳಿ, ವೆಸ್ಟ್ ಆಫ್ ಕಾರ್ಡ್ ರೋಡ್ 1ನೇ ಕ್ರಾಸ್-5ನೇ ಕ್ರಾಸ್, ಮಹಾಗಣಪತಿನಗರ, ಕೆ.ಹೆಚ್.ಬಿ.ಕಾಲೋನಿ 2ನೇ ಹಂತ, ವೆಸ್ಟ್ ಆಫ್ ಕಾರ್ಡ್ ರೋಡ್, ಎಂ.ಸಿ.ಲೇಔಟ್, ಹೊಸಹಳ್ಳಿ ಮೈನ್ ರೋಡ್, ಹಂಪಿನಗರ, ಮಾಗಡಿ ಮುಖ್ಯ ರಸ್ತೆ, ಬಿನ್ನಿಪೇಟೆ, ಜಗಜೀವನರಾಂ ನಗರ, ಗೋಪಾಲಪುರ, ಹೊಸಹಳ್ಳಿ, ಹಳೇಗುಡ್ಡದಹಳ್ಳಿ, ಗೋರಿಪಾಳ್ಯ, ವಿ.ಎಸ್.ಗಾರ್ಡನ್, ಗೂಡ್ಸ್ ಶೆಡ್ ರೋಡ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.