ಬೆಂಗಳೂರು : ದಿನಾಂಕ:13.01.2025 ರಂದು ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕನಕಪುರ ಮುಖ್ಯರಸ್ತೆ ರಸ್ತೆಯಲ್ಲಿರುವ ಶ್ರೀ ಬನಶಂಕರಿ ಅಮ್ಮನವರ ಬ್ರಹ್ಮ ರಥೋತ್ಸವ ಪ್ರಯುಕ್ತ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರರು ರಥೋತ್ಸವಕ್ಕೆ ದರ್ಶನಕ್ಕಾಗಿ ಬರುವ ನಿರೀಕ್ಷೆ ಇದ್ದು, ಈ ಸಮಯದಲ್ಲಿ ಪಾದಚಾರಿಗಳ ಹಾಗೂ ವಾಹನ ಸವಾರರ ಹಿತದೃಷ್ಠಿಯಿಂದ ಈ ಕೆಳಕಂಡಂತೆ ಸಂಚಾರ ಮಾರ್ಪಾಡು ಮಾಡಲಾಗಿರುತ್ತದೆ.
ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆ.
ಕನಕಪುರ ಮುಖ್ಯರಸ್ತೆ ಬನಶಂಕರಿ ದೇವಸ್ಥಾನದಿಂದ ಸಾರಕ್ಕಿ ಮಾರ್ಕೆಟ್ ಜಂಕ್ಷನ್ ವರೆಗೆ.
ನಿರ್ಬಂಧಿಸಲಾದ ಸಂಚಾರಕ್ಕೆ ಬದಲಿ ಮಾರ್ಗಗಳು:
ಕನಕಪುರ ಮುಖ್ಯರಸ್ತೆ ಕೋಣನಕುಂಟೆ ಕಡೆಯಿಂದ ಬನಶಂಕರಿ ಬಸ್ ನಿಲ್ದಾಣದ ಕಡೆಗೆ ಹೋಗುವ ವಾಹನಗಳು ಜೆ.ಪಿ. ನಗರ ಮೇಟೊ ಜಂಕ್ಷನ್ (ಸಾರಕ್ಕಿ ಸಿಗ್ನಲ್) ಹತ್ತಿರ ಬಲ ತಿರುವು ಪಡೆದು ಸಿಂಧೂರ ವೃತ್ತದ ಮೂಲಕ ರಾಜಲಕ್ಷ್ಮಿ ಮಾರ್ಗವಾಗಿ ಸಂಚರಿಸಿ ಅವಶ್ಯಕ ಮಾರ್ಗಗಳಲ್ಲಿ ಹೋಗಬಹುದು ಅಥವಾ ಸಾರಕ್ಕಿ ಮಾರ್ಕೆಟ್ ಜಂಕ್ಷನ್ ಬಲ ತಿರುವು ಪಡೆದು ಇಂದಿರಗಾಂಧಿ ಸರ್ಕಲ್ ಹತ್ತಿರ ಎಡತಿರುವು ಪಡೆದು ಆರ್.ವಿ. ಆರ್ಸ್ಟ ಮೂಲಕ ಅವಶ್ಯಕ ಮಾರ್ಗಗಳಲ್ಲಿ ಸಂಚರಿಸಬಹುದು.
ಬನಶಂಕರಿ ಬಸ್ ನಿಲ್ದಾಣದ ಕಡೆಯಿಂದ ಸಾರಕ್ಕಿ ಸಿಗ್ನಲ್ ಕಡೆ ಸಂಚರಿಸುವ ವಾಹನಗಳು ಬನಶಂಕರಿ ಬಸ್ ನಿಲ್ದಾಣದ ಹತ್ತಿರ ಬಲ ತಿರುವು ಪಡೆದು ಯಾರಬ್ ನಗರದ ಮೂಲಕ ಕೆ.ಎಸ್. ಲೇಔಟ್ ಜಂಕ್ಷನ್ ನಲ್ಲಿ ಎಡತಿರುವು ಪಡೆದು ಇಲಿಲಯಾಸ್ ನಗರ-ಸಾರಕ್ಕಿ ಸಿಗ್ನಲ್ ತಲುಪಿ ಅವಶ್ಯಕ ಮಾರ್ಗಗಳಲ್ಲಿ ಸಂಚರಿಸಬಹುದು.