ಬೆಂಗಳೂರು: ನಗರದಲ್ಲಿ ಮಂಗಗಳು ಮತ್ತು ಇತರೆ ವನ್ಯಜೀವಿಗಳಿಂದ ಆಗುವ ತೊಂದರೆಗಳಿಗೆ ಸಾರ್ವಜನಿಕರು ಟೋಲ್ ಫ್ರೀ ಸಂ. 1533 ದೂರುಗಳನ್ನು ನೀಡುವಂತೆ ಬಿಬಿಎಂಪಿ ( BBMP ) ತಿಳಿಸಿದೆ.

ಈ ಕುರಿತಂತೆ ಆದೇಶ ಹೊರಡಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಂಗಗಳ ಹಾವಳಿ ಕಂಡುಬಂದ ಸಂದರ್ಬದಲ್ಲಿ ಸಾರ್ವಜನಿಕರು ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಪತ್ರದ ಮೂಲಕ, ದೂರವಾಣಿ ಮೂಲಕ ದೂರುಗಳನ್ನು ನೀಡುತ್ತಿರುತ್ತಾರೆ ಎಂದಿದೆ.

BIG NEWS: ರಾಜ್ಯ ಸರ್ಕಾರದಿಂದ ‘ಕೇಂದ್ರ ನೀತಿ ಆಯೋಗ’ದ ಮಾದರಿಯಲ್ಲಿ ‘ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆ’ ರಚಿಸಿ ಆದೇಶ

ಘನ ಕರ್ನಾಟಕ ಉಚ್ಚ ನ್ಯಾಯಾಲಯವು ರಿಟ್ ಪಿಟಿಷನ್ ಸಂಖ್ಯೆ: 5120/2021 ರಂತೆ ವೈಜ್ಞಾನಿಕ ರೀತಿಯಲ್ಲಿ ಪ್ರಾಣಿಹಿಂಸೆ ಆಗದಂತೆ ಮತ್ತು ವನ್ಯಜೀವಿ ಸಂರಕ್ಷಣಾ ಕಾಯಿದೆ 1972 ಮತ್ತು ಪ್ರಾಣಿಹಿಂಸೆ ತಡೆ ಕಾಯಿದೆ 1960 ಉಲ್ಲಂಘನೆಯಾಗದಂತೆ ಸಾರ್ವಜನಿಕರ ಜೀವಕ್ಕೆ ಹಾನಿಯಾಗದ ರೀತಿಯಲ್ಲಿ ಗಾಯಗೊಂಡ, ರೋಗಗ್ರಸ್ಥ ಹಾಗೂ ಸಾರ್ವಜನಿಕರಿಗೆ ಹಾನಿಯುಂಟುಮಾಡುವಂತಹ ಮಂಗಗಳನ್ನು ರಕ್ಷಣೆ ಮಾಡಿ ಸೂಕ್ತ ಆವಾಸ ಸ್ಥಳಕ್ಕೆ/ಪುನರ್‌ವಸತಿ ಸ್ಥಳಾಂತರ ಮಾಡಲಾಗುತ್ತದೆ ಎಂದು ಹೇಳಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ವನ್ಯಜೀವಿಗಳಿಂದ(ಮಂಗಗಳು, ಹಾವುಗಳು, ಪಕ್ಷಿಗಳು ಹಾಗೂ ಇನ್ನಿತರೆ) ಆಗಬಹುದಾದ ತೊಂದರೆಗಳನ್ನು ನಿವಾರಣೆ ಮಾಡುವ ಸಂಬಂಧ ಹಾಗೂ ತುರ್ತು ಸಂದರ್ಭಗಳಲ್ಲಿ ಬಿಬಿಎಂಪಿ ವ್ಯಾಪ್ತಿಯ ಸಾರ್ವಜನಿಕರುಗಳು ಪಾಲಿಕೆಯ ಟೋಲ್ ಫ್ರೀ ಸಂ: 1533( oll free No: 1533) ಅನ್ನು ಅಥವಾ ನಮ್ಮ ಬೆಂಗಳೂರು ಮೊಬೈಲ್ ಆಫ್(Namma Bengaluru Mobile App) ಮುಖಾಂತರ ದೂರುಗಳನ್ನು ದಾಖಲಿಸಲು ಉಪ ಅರಣ್ಯ ಸಂರಕ್ಷಣಾಧಿಕಾರಿ ರವರು ಕೋರಿದೆ.

BREAKING NEWS : ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ : ಸರ್ಕಾರಿ ಬಸ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು

Share.
Exit mobile version