ಬಳ್ಳಾರಿ: ಇಲ್ಲಿ ಡಿಸೆಂಬರ್ ನಲ್ಲಿ ನಡೆಯಲು ನಿರ್ಧರಿಸಿರುವಂತ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಕ್ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ.
ಇಂದು ಬಳ್ಳಾರಿಯಲ್ಲಿ ನಡೆದಂತ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಸಭೆ ನಡೆಯಿತು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಷಿ, ಡಿಸೆಂಬರ್ ನಲ್ಲಿ ಬಳ್ಳಾರಿಯಲ್ಲಿ ಜರುಗಲಿರುವಂತ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಕ್ ಅವರ ಹೆಸರನ್ನು ಇಂದಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಂತಿಮಗೊಳಿಸಿರುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ದೀಪ ಬಾಸ್ತಿ ಅವರನ್ನು ಗೌರವಿಸಿ ಸನ್ಮಾನಿಸಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.
BREAKING : ಬೆಂಗಳೂರಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದ ‘PSI’ ಚಿಕಿತ್ಸೆ ಫಲಿಸದೇ ಸಾವು!
BIG NEWS : 5 ವರ್ಷವೂ ಸರ್ಕಾರ ಸ್ಥಿರವಾಗಿರುತ್ತೆ ಸಿದ್ದರಾಮಯ್ಯರೆ ‘CM’ ಆಗಿರ್ತಾರೆ : ಸಚಿವ ಹೆಚ್ ಸಿ ಮಹದೇವಪ್ಪ