ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ ಇಂದು ಆರಂಭವಾಗಲಿದೆ. ಬೆಳಗ್ಗೆ 10.10 ರಿಂದ 10.40ರೊಳಗೆ ಸಲ್ಲುವ ಶುಭವೃಶ್ಚಿಕ ಲಗ್ನದಲ್ಲಿ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಸ್ತಾಕ್ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಇದೇ ಮೊದಲ ಸಲ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ಸಿದ್ದರಾಮಯ್ಯಗೆ ಸಿಎಂ ಆಗಿ ಇದು 8ನೇ ದಸರಾ, ಉಸ್ತುವಾರಿ ಸಚಿವರಾಗಿ ಡಾ.ಎಚ್.ಸಿ. ಮಹದೇವಪ್ಪ ಅವರಿಗೆ ಇದು 5ನೇ ದಸರಾ.
ಮುನ್ನೆಚ್ಚರಿಕಾ ಕ್ರಮವಾಗಿ ಚಾಮುಂಡಿಬೆಟ್ಟದ ಮಾರ್ಗದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇದೇ ಮೊದಲ ಬಾರಿಗೆ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ.