ಬೆಂಗಳೂರು: ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ಖಂಡಿಸಿ ನಾಳೆ ಮದ್ಯ ಮಾರಾಟಗಾರರಿಂದ ಎಣ್ಣೆ ಮಾರಾಟ ಬಂದ್ ಮಾಡಿ ಪ್ರತಿಭಟನೆ ನಿರ್ಧರಿಸಲಾಗಿತ್ತು. ಇಂದು ಸಿಎಂ ಸಿದ್ಧರಾಮಯ್ಯ ಜೊತೆಗಿನ ಮಾತುಕತೆ ಸಕ್ಸಸ್ ಆದ ಪರಿಣಾಮ, ನಾಳೆ ರಾಜ್ಯಾಧ್ಯಂತ ಬಾರ್ ಬಂದ್ ಮಾಡದೇ, ಮದ್ಯ ಮಾರಾಟ ಮಾಡಲು ನಿರ್ಧರಿಸಿದ್ದಾರೆ.
ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ನಿಯಂತ್ರಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸ್ವಚ್ಛ ಅಬಕಾರಿ ಅಭಿಯಾನದಡಿ ನ. 20ರನಾಳೆ ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್‌ಗೆ ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಶನ್ ಕರ್ನಾಟಕ ಕರೆ ನೀಡಿತ್ತು.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಂತ ಪ್ರಧಾನ ಕಾರ್ಯದರ್ಶಿ ಬಿ. ಗೋವಿಂದರಾಜ್ ಹೆಗ್ಡೆ, ಅಬಕಾರಿ ಇಲಾಖೆ ಯನ್ನು ಆರ್ಥಿಕ ಸಚಿವರೇನಿರ್ವಹಿಸಬೇಕು. ಈ ಬಗ್ಗೆ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಬೇಕು. ವ್ಯಾಪಾರಿಗಳು ಪರವಾನಗಿ ಪಡೆಯುವಾಗ ಹಾಗೂ ಮರು ನೋಂದಣಿ ಮಾಡಿಕೊಳ್ಳುವಾಗ ಅಧಿಕಾರಿಗಳು ಲಂಚ ಕೇಳುತ್ತಿರುವ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದರು.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣದಲ್ಲಿ ಭಏಟಿಯಾಗಿ ಮಾತುಕತೆ ನಡೆಸಿದರು. ಸಿಎಂ ಸಿದ್ಧರಾಮಯ್ಯ ಅವರ ಬೇಡಿಕೆ ಈಡೇರಿಸಲು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿರುವಂತ ಕಾರಣ, ನಾಳೆ ನಿಗದಿ ಮಾಡಲಾಗಿದ್ದಂತ ಮದ್ಯ ಮಾರಾಟ ಬಂದ್ ಮಾಡಿ, ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಗಿದೆ.
BREAKING : ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಕ್ರಿಕೇಟರ್ ಸೂರ್ಯ ಕುಮಾರ ಯಾದವ್ ಭೇಟಿ, ಪೂಜೆ ಸಲ್ಲಿಕೆ
‘BPL ರೇಷನ್ ಕಾರ್ಡ್’ಗೆ ಅನರ್ಹರಾದವರು ‘APL’ಗೆ ಸೇರ್ಪಡೆ: ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ