ದಾವಣಗೆರೆ : ಹಿರಿಯ ಸಾಹಿತಿ ‘ಬರಗೂರು ರಾಮಚಂದ್ರಪ್ಪ’ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸ್ಥಳೀಯ ಅಕ್ಷಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ದಾವಣಗೆರೆ ಜಿಲ್ಲೆಯ ಹರಿಹರ ಗ್ರಾಮದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಧಿಡೀರ್ ಆಗಿ ಕುಸಿದು ಬಿದ್ದಿದ್ದಾರೆ. ರಕ್ತದೊತ್ತಡ ಹೆಚ್ಚಾದ ಹಿನ್ನೆಲೆ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸದ್ಯ, ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆ.ಜಿ ಅಕ್ಕಿ ಕೊಡುತ್ತೇವೆ : ಸಿದ್ದರಾಮಯ್ಯ ಘೋಷಣೆ
GOOD NEWS : ಕುಶಲಕರ್ಮಿಗಳಿಗೆ ಗುಡ್ ನ್ಯೂಸ್ : ಸಹಾಯಧನಕ್ಕೆ ಅರ್ಜಿ ಆಹ್ವಾನ