ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾಗಿದ್ದಂತ ಜಗದೀಶ್ ಶೆಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. ಇಂತಹ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಅವರೋಧವಾಗಿ ಬಸನಗೌಡ ಬಾದರ್ಲಿ ಅವರು ಆಯ್ಕೆಯಾಗಿದ್ದಾರೆ.
ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ ಮಾಡಲಾಗಿತ್ತು. ಈ ಚುನಾವಣೆಗೆ ಬಸನಗೌಡ ಬಾದರ್ಲಿ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಹೊರತಾಗಿ ಬೇರೆ ಯಾರೂ ನಾಮಪತ್ರವನ್ನು ಸಲ್ಲಿಸಿರಲಿಲ್ಲ. ಹೀಗಾಗಿ ಅವಿರೋಧವಾಗಿ ವಿಧಾನ ಪರಿಷತ್ ಸದಸ್ಯರಾಗಿ ಬಸನಗೌಡ ಬಾದರ್ಲಿ ಅವರು ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಘೋಷಣೆ ಮಾಡಿದ್ದು, ಅವಿರೋಧವಾಗಿ ವಿಧಾನಪರಿಷತ್ ಸದಸ್ಯರಾಗಿ ಬಸನಗೌಡ ಬಾದರ್ಲಿ ಅವರು ಆಯ್ಕೆಯಾಗಿರುವುದಾಗಿ ತಿಳಿಸಿದ್ದಾರೆ.
ಅಂದಹಾಗೇ ಚುನಾವಣಾ ಕಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಬಾದರ್ಲಿ ಮಾತ್ರ ಉಳಿದಿರುವುದರಿಂದ ಅವಿರೋಧ ಆಯ್ಕೆಯಾಗಿದ್ದಾರೆ. ಇವರ ಮೇಲನೆ ಸದಸ್ಯತ್ವದ ಅವಧಿ 2028ರ ಜೂನ್ 14ರವರೆಗೆ ಇರಲಿದೆ. ಈ ಚುನಾವಣಾ ಫಲಿತಾಂಶದ ನಂತರ ಮೇಲನೆಯಲ್ಲಿ ಕಾಂಗ್ರೆಸ್ ಸದಸ್ಯರ ಬಲ 33ಕ್ಕೆ ಹೆಚ್ಚಾದಂತೆ ಆಗಿದೆ.
BREAKING: ಬ್ರಿಟನ್ ನೂತನ ಪ್ರಧಾನಿಯಾಗಿ ‘ಕೈರ್ ಸ್ಟಾರ್ಮರ್’ ನೇಮಕ | Keir Starmer Appointed UK PM
‘ಮುಖ್ಯಮಂತ್ರಿ ಕುರ್ಚಿ’ ಮೇಲೆ ಕಣ್ಣಿಟ್ಟವರಿಂದಲೇ ‘ಮುಡಾ ಹಗರಣ’ ಬಹಿರಂಗ: ‘HDK’ ಗಂಭೀರ ಆರೋಪ