ಬೆಳಗಾವಿ: ಗುಜರಾತ್ ಮಾದರಿಯಲ್ಲೇ ಕರ್ನಾಟಕ ವಿಧಾನಸಭೆ ಚುನಾವಣೆಗೆ ಹೊಸಬರಿಗೆ ಅವಕಾಶ ನೀಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಯತ್ನಾಳ್ ಗುಜರಾತ್ ಮಾದರಿಯಲ್ಲೇ ಕರ್ನಾಟಕ ವಿಧಾನಸಭೆ ಚುನಾವಣೆಗೆ ಹೊಸಬರಿಗೆ ಅವಕಾಶ ನೀಡಬೇಕು ಎಂದರು.
ಒಂದೇ ಕುಟುಂಬದಲ್ಲಿ ಎರಡು ಮೂರು ಟಿಕೆಟ್ ಸಿಗುವುದಿಲ್ಲ. ಅಪ್ಪ, ಮಕ್ಕಳು, ಅಣ್ಣ ತಮ್ಮ ಅವರಿಗೆ ಟಿಕೆಟ್ ಸಿಗುವುದಿಲ್ಲ ಎಂದರು. ರಾಜ್ಯ ಸಚಿವ ಸಂಪುಟ ವಿಸ್ತರಣೆ ಈಗ ಯಾರಿಗೂ ಬೇಕಾಗಿಲ್ಲ. ಎಲ್ಲವನ್ನೂ ಮುಖ್ಯಮಂತ್ರಿ ಬೊಮ್ಮಾಯಿ ಅವರೇ ಇಟ್ಟುಕೊಳ್ಳಲಿ. ಮೂರ್ನಾಲ್ಕು ತಿಂಗಳಲ್ಲಿ ಏನು ಅಭಿವೃದ್ಧಿ ಮಾಡಲು ಆಗುತ್ತೆ? ಹೊಸ ಸರ್ಕಾರದಲ್ಲಿ ಮಂತ್ರಿ ಆಗಬೇಕೆಂದು ಎಲ್ಲರೂ ಸುಮ್ಮನಿದ್ದಾರೆ ಎಂದು ಖಡಕ್ ಆಗಿ ಹೇಳಿದ್ದಾರೆ.
ಗುಜರಾತ್ ಮಾದರಿಯಲ್ಲಿ ಬಿಜೆಪಿ ಟಿಕೆಟ್ ಹಂಚಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಗುಜರಾತ್ ಮಾದರಿಯಲ್ಲೇ ಹೊಸಬರಿಗೆ ಅವಕಾಶ ನೀಡಬೇಕು. ಈ ಬಾರಿ ಕರ್ನಾಟಕದಲ್ಲಿ ಬಹಳಷ್ಟು ಬದಲಾವಣೆ ಮಾಡ್ತಾರೆ ಎಂದು ಯತ್ನಾಳ್ ಹೇಳಿದರು.
BREAKING NEWS : ಸಿದ್ದರಾಮಯ್ಯ, ಡಿಕೆಶಿ ಪ್ರತ್ಯೇಕ ಬಸ್ ಯಾತ್ರೆಗೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್
BIGG NEWS : ಗ್ರಾ.ಪಂ ಸದಸ್ಯರ ವೇತನ 10 ಸಾವಿರಕ್ಕೆ ಹೆಚ್ಚಿಸಲು ಆಗ್ರಹ : ಬೆಂಗಳೂರಿನಲ್ಲಿ ಪ್ರತಿಭಟನೆ