ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದ ಪಂಚಮಸಾಲಿ ಪೀಠದಿಂದ ಜಯ ಮೃತ್ಯುಂಜಯ ಸ್ವಾಮೀಜಿಗಳನ್ನು ಉಚ್ಚಾಟನೆ ಮಾಡಿದ ಹಿನ್ನೆಲೆಯಲ್ಲಿ, ಕೂಡಲಸಂಗಮ ಪಂಚಮಸಾಲಿ ಪೀಠದ ಬಳಿ ಇದೀಗ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮ ಗ್ರಾಮದಲ್ಲಿ 1 DAR,ತುಕಡಿ, 20ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಇದೀಗ ಟ್ರಸ್ಟ್ ಸಿಬ್ಬಂದಿಗಳು ಬೀಗ ಹಾಕಿದ್ದಾರೆ. ಸದ್ಯ ಪಂಚಮಸಾಲಿ ಪೀಠದ ಆವರಣ ಜನರಿಲ್ಲದೆ ಬೀಕೋ ಎನ್ನುತ್ತಿದೆ.ಪೀಠದ ಕಡೆಗೆ ಯಾರೂ ಹೋಗದಂತೆ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ.
ಬಸವ ಜಯ ಮೃತ್ಯುಂಜಯ ಶ್ರೀಗಳು ಕೂಡಲಸಂಗಮಕ್ಕೆ ಬರುವ ಸಾಧ್ಯತೆ ಇದೆ. ಹಾಗಾಗಿ ಯಾವುದೇ ಅಹಿತಕರ ಘಟನೆ ಆಗದಂತೆ ಪೊಲೀಸರು ಬಿಗಿ ಭದ್ರತೆ ಒದಗಿಸಲಾದಾಗಿದೆ. ಕೂಡಲಸಂಗಮದಲ್ಲಿ ಭಕ್ತರ ಜೊತೆಗೆ ಸ್ವಾಮೀಜಿ ಚರ್ಚಿಸುವ ಸಾಧ್ಯತೆ ಇದೆ. ಪೀಠದ ಆವರಣ ಬಿಟ್ಟು ಬೇರೆ ಸ್ಥಳದಲ್ಲಿ ಭಕ್ತರ ಜೊತೆಗೆ ಶ್ರೀಗಳು ಚರ್ಚಿಸಿ ಏನು ಹೇಳುತ್ತಾರೆ ಎಂದು ಕಾದು ನೋಡಬೇಕಾಗಿದೆ.