ಬೆಂಗಳೂರು : ಲಿಂಗಾಯತರಿಗೆ 2ಡಿ ಅಡಿ ಮೀಸಲಾತಿ ಹೆಚ್ಚಳ ಮಾಡಿದ್ದು, ಈ ಬಗ್ಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ.
ಸಚಿವ ಸಂಪುಟ ನಿರ್ಧಾರದ ಬಗ್ಗೆ ಪರಿಶೀಲನೆ ನಡೆಸಿ ಶನಿವಾರ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.
ಹಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ., ಮೀಸಲಾತಿ ಶೇ 7ರಷ್ಟು ಹೆಚ್ಚಿಸಿರುವ ಬಗ್ಗೆ ನಾವು ಚರ್ಚೆ ಮಾಡುತ್ತೇವೆ. ನಮ್ಮ ನಾಯಕರ ಜೊತೆ ಚರ್ಚಿಸಿ ನಾಳೆ ನಿರ್ಧಾರ ಪ್ರಕಟಿಸುತ್ತೇವೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ.