ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿಗೆ ಜಯ ಮೃತ್ಯುಂಜಯ ಸ್ವಾಮೀಜಿ ಕಾಲಾವಕಾಶ ನೀಡಿದ್ದರು. ಈ ಕಾಲಾವಕಾಶ ಮುಕ್ತಾಯಗೊಂಡ ಹಿನ್ನಲೆಯಲ್ಲಿ, ಸೆಪ್ಟೆಂಬರ್ 20ರಂದು ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿರುವಂತ ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲಾಗುತ್ತದೆ. ಅವರ ನಿವಾಸದ ಮುಂದೆ ಧರಣಿ ನಡೆಸಲಾಗುತ್ತದೆ ಎಂಬುದಾಗಿ ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಎಂ ಬೊಮ್ಮಾಯಿ ಪಡೆದಿದ್ದ ಕಾಲಾವಕಾಶ ಮುಗಿದಿದೆ. ಸಮಯ ಮುಗಿದರೂ ಮೀಸಲಾತಿ ವಿಚಾರದಲ್ಲಿ ನಿರ್ಧಾರ ಕೈಗೊಂಡಿಲ್ಲ. ಹೀಗಾಗಿ ಸಿಎಂ ಹಾವೇರಿ ಜಿಲ್ಲೆಯ ಶಿಗ್ಗಾಂನಲ್ಲಿರುವಂತ ನಿವಾಸದ ಮುಂದೆ ಧರಣಿ ನಡೆಸೋದಕ್ಕೆ ನಿರ್ಧರಿಸಲಾಗಿದೆ ಎಂದರು.
BIG BREAKING NEWS: ವಿಧಾನ ಪರಿಷತ್ನಲ್ಲಿ ಧ್ವನಿ ಮತದ ಮೂಲಕ ಮತಾಂತರ ನಿಷೇಧ ವಿಧೇಯಕ ಅಂಗೀಕಾರ
ಸೆ.20ರಂದು ಸಿಎಂ ಬೊಮ್ಮಾಯಿ ನಿವಾಸದ ಮುಂದೆ ನಡೆಯಲಿರುವಂತ ಧರಣಿಗೆ 1 ಲಕ್ಷ ಜನರು ಭಾಗಿಯಾಗಲಿದ್ದಾರೆ. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸದ ಕಾರಣ ಈ ಧರಣಿ ನಡೆಸಲಾಗುತ್ತದೆ ಎಂಬುದಾಗಿ ಹೇಳಿದರು.