ರಾಮನಗರ: ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಮದನಾರಿ ಪತ್ತೆಯೇ ಪೊಲೀಸರಿಗೆ ದೊಡ್ಡ ತಲೆನೋವಾಗಿದೆ.
ಬಂಡೇಮಠದ ಸ್ವಾಮೀಜಿ ಆತ್ಮಹತ್ಯೆ ನಂತರ ಕೆಲವು ವಿಡಿಯೋಗಳು ವೈರಲ್ ಆಗಿದ್ದು, ಹನಿಟ್ರ್ಯಾಪ್ ಜಾಲಕ್ಕೆ ಸ್ವಾಮೀಜಿ ಸಿಲುಕಿದ್ರು ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಪೊಲೀಸರು ವಿಡಿಯೋ ಹಿಂದಿರುವ ಯುವತಿಯನ್ನು ಖೆಡ್ಡಾಗೆ ಬೀಳಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬೆಂಗಳೂರು ಮೂಲದ ಯುವತಿಯನ್ನು ಬಿಟ್ಟು ಹನಿಟ್ರ್ಯಾಪ್ ಮಾಡಲಾಗಿದೆ ಎಂಬುದು ತಿಳಿದುಬಂದಿತ್ತು. ಆ ಮಾಯಾಂಗನಿ ಯಾರು ಎಂಬುದನ್ನ ಪತ್ತೆ ಹಚ್ಚಲು ಪೊಲೀಸರಿಗೆ ದೊಡ್ಡ ತಲೆನೋವಾಗಿದೆ. ಇನ್ನೂ, ಸ್ವಾಮೀಜಿಗಳ 20ಕ್ಕೂ ಹೆಚ್ಚು ವಿಡಿಯೋಗಳು ಇದ್ದು, ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನೂ. ವಿಡಿಯೋ ಹಿಂದಿರುವ ಮದನಾರಿಯನ್ನ ಪತ್ತೆಹಚ್ಚುವುದು ಪೊಲೀಸರಿಗೆ ದೊಡ್ಡ ತಲೆನೋವಾಗಿದೆ.
ಬಸವಲಿಂಗಶ್ರೀ ಡೆತ್ ನೋಟ್ ಉಲೇಖಿಸಿದ್ದ ಸ್ವಾಮೀಜಿ ಪರಾರಿ
ಇದರ ನಡುವೆ ಕಳೆದ 2 ದಿನಗಳಿಂದ ಮಠದಿಂದ ಸ್ವಾಮೀಜಿ ನಾಪತ್ತೆಯಾಗಿದ್ದಾರೆ. ಮತ್ತೊಂದೆಡೆಗೆ ನಿರೀಕ್ಷಣಾ ಜಾಮೀನಿಗೆ ಸ್ವಾಮೀಜಿ ಅರ್ಜಿ ಸಲ್ಲಿಸಿದ್ದಾರೆ. ಇಂದು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಯ ಕಾರು ಚಾಲಕ ಜ್ಯೋತಿ ಹಾಗೂ ದೇವಸ್ಥಾನದ ಆರ್ಚಕ ಅಂಬರೀಷ್ ಅವರ ಮೊಬೈಲ್ ಫೋನ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವರಿಬ್ಬರೂ ಸ್ವಾಮೀಜಿಗೆ ಹೆಚ್ಚು ಆಪ್ತರಾಗಿದ್ದವರು ಎಂದು ಹೇಳಲಾಗಿದೆ.
ಪ್ರಕರಣ ಸಂಬಂಧ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದು, ವಿಡಿಯೊ ಕಾಲ್ ಮಾಡಿದ ಯುವತಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ. ಪೊಲೀಸರಿಗೆ ಮಹತ್ವದ ಸುಳಿವು ಲಭ್ಯವಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಬೆಂಗಳೂರಿನಲ್ಲೇ ಕುದೂರು ಠಾಣೆ ಪೊಲೀಸರು ಬೀಡುಬಿಟ್ಟಿದ್ದಾರೆ.
Alert ; ಸರ್ಕಾರಿ ನೌಕರರೇ ಎಚ್ಚರ.! ನೀವು ಮಾಡುವ ಈ ಸಣ್ಣ ತಪ್ಪು ನಿಮ್ಮ ‘ಪಿಂಚಣಿ, ಗ್ರಾಚ್ಯುಟಿ’ ನಿಲ್ಲಿಸುತ್ತೆ
BREAKING NEWS : ರಾಷ್ಟ್ರ ರಾಜಧಾನಿಯಲ್ಲಿ ಮಿತಿ ಮೀರಿದ ವಾಯು ಮಾಲಿನ್ಯ ; ನಿರ್ಮಾಣ, ನೆಲಸಮ ಚಟುವಟಿಕೆಗಳಿಗೆ ಬ್ರೇಕ್
ಗಡಿಜಿಲ್ಲೆ ಚಾಮರಾಜನಗರದಲ್ಲಿ ‘ಅಪ್ಪು’ ಸ್ಮರಣೆ : ಅಭಿಮಾನಿಗಳಿಂದ ಅನ್ನಸಂತರ್ಪಣೆ |Puneeth Raj Kumar