ರಾಮನಗರ: ಜಿಲ್ಲೆಯ ಶ್ರೀ ಕಂಚುಗಲ್ ಬಂಡೇಮಠದ ಗುರು ಮಡಿವಾಳೇಶ್ವರ ಬಸವಲಿಂಗ ಸ್ವಾಮೀಜಿ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.
ಪ್ರಕರಣದ ಎ 2 ಆರೋಪಿ ನೀಲಾಂಬಿಕೆ, ಎ3 ಆರೋಪಿ ಮಹಾದೇವಯ್ಯ ಅವರನ್ನು ಇಂದು ಮಾಗಡಿ ಪೊಲೀಸರು ಕೋರ್ಟ್ ಮುಂದೆ ಹಾಜರುಪಡಿಸಿದ್ದರಿ, ಬಳಿಕ ನ್ಯಾಯಾಲಯ ಇಬ್ಬರು ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಇನ್ನೂ, ಮಾಗಡಿಯ ಕಣ್ಣೂರು ಮಠದ ಮೃತ್ಯುಂಜಯ ಶ್ರೀಗಳನ್ನು ಪೊಲೀಸರು ಬಂಧಿಸಿದ್ದರು. ಅವರನ್ನು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಅವರಿಗೆ ಇದೀಗ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ.
ಬಂಡೇಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣಕ್ಕೆ ಇಂದು ಬಿಗ್ ಟ್ವಿಸ್ಟ್ ಸಿಕ್ಕಿತ್ತು. ಸಹೋದರ ಸಂಬಂಧಿಯಾಗಿದ್ದಂತ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿಯೇ ಹನಿಟ್ರ್ಯಾಫ್ ಮಾಡಿಸಿರೋದಾಗಿ ತಿಳಿದು ಬಂದಿತ್ತು. ಈ ಸಂಬಂಧ ಪೊಲೀಸರು ಮೃತ್ಯುಂಜಯ ಶ್ರೀಗ ಹಾಗೂ ಅವರ ಜೊತೆಗೆ ಹನಿಟ್ರ್ಯಾಪ್ ಮಾಡಿದ್ದಂತ ಯುವತಿಯನ್ನು ಬಂಧಿಸಿದ್ದರು.
ಅಂದಹಾಗೇ ಶ್ರೀ ಕಂಚುಗಲ್ ಬಂಡೇಮಠದ ಗುರು ಮಡಿವಾಳೇಶ್ವರ ಬಸವಲಿಂಗ ಸ್ವಾಮೀಜಿ ಸ್ವಾಮೀಜಿ(45) ಮಠದಲ್ಲೇ ನೇಣಿಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ನೇಣಿಗೆ ಶರಣಾಗಿದ್ದಾರೆ. ಸ್ವಾಮೀಜಿ ವಿರುದ್ಧ ಹನಿಟ್ರ್ಯಾಪ್ ನಡೆದಿದ್ದು, ಡೆತ್ನೋಟ್ನಲ್ಲಿ ಸಂಚಿನ ಬಗ್ಗೆ ಕುಂಚಗಲ್ ಬಂಡೆಮಠದ ಬಸವಲಿಂಗಶ್ರೀ ಸ್ವಾಮೀಜಿ ಬರೆದಿದ್ದಾರೆ. ಕುಂಚಗಲ್ ಸ್ವಾಮೀಜಿ ಕೆಳಗಿಳಿಸಲು ನಡೆದಿತ್ತು ಮಾಸ್ಟರ್ ಪ್ಲಾನ್, ಮಾಸ್ಟರ್ ಪ್ಲಾನ್ ಹಿಂದೆ ಇರೋ ವ್ಯಕ್ತಿ ಮತ್ತೋರ್ವ ಸ್ವಾಮೀಜಿ ಎನ್ನಲಾಗಿತ್ತು.
655 ಯುವಕರಿಗೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದ ಅಸ್ಸಾಂ ಸಿಎಂ ಹಿಮಂತ ಬಿಸ್ವಾ
ಬೊಮ್ಮಾಯಿ ಸರ್ಕಾರ ‘ಸ್ವೀಟ್ ಬಾಕ್ಸ್ ಲಂಚ’ದ ಸಮರ್ಥನೆಗೆ ಇಳಿದಿರುವುದು ನಾಚಿಕೆಗೇಡಿನ ಸಂಗತಿ : ಕಾಂಗ್ರೆಸ್ ವಾಗ್ಧಾಳಿ
ಜನ ಸಾಮಾನ್ಯರಿಗೆ ಗುಡ್ ನ್ಯೂಸ್ ; ಖಾದ್ಯ ತೈಲ ಬೆಲೆ ತೀವ್ರ ಇಳಿಕೆ, ‘ಅಡುಗೆ ಎಣ್ಣೆ’ ಈಗ ಮತ್ತಷ್ಟು ಅಗ್ಗ