ಬೆಂಗಳೂರು : ಬಂಡೇಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಶ್ರೀಗಳಿಗೆ ಖೆಡ್ಡಾ ತೋಡಿದ್ದ ಯುವತಿ ಹಾಗೂ ಕಣ್ಣೂರು ಮಠದ ಶ್ರೀಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹೌದು, ಹನಿಟ್ರ್ಯಾಪ್ ಮಾಡಿಸಿದ್ದ ಆರೋಪದ ಮೇಲೆ ಮಾಗಡಿ ತಾಲ್ಲೂಕು ಕಣ್ಣೂರು ಮಠದ ಸ್ವಾಮೀಜಿ ಹಾಗೂ ಹನಿಟ್ರ್ಯಾಪ್ ವಿಡಿಯೊದಲ್ಲಿ ಕಾಣಿಸಿಕೊಂಡಿದ್ದಾಳೆ ಎಂಬ ಆರೋಪ ಹೊತ್ತ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ, ಪೊಲೀಸರು ಇವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದು, ಪ್ರಕರಣದಲ್ಲಿ ಮತ್ತಷ್ಟು ಜನರು ಬಲೆಗೆ ಬೀಳುವ ಸಾಧ್ಯತೆ ಇದೆ.
ಬಂಡೆಮಠ ಸ್ವಾಮೀಜಿ ಆತ್ಮಹತ್ಯೆ ಕೇಸ್ ನಲ್ಲಿ ಬಂಧಿಯಾಗಿರುವ ಕಣನೂರು ಮೃತ್ಯುಂಜಯ ಶ್ರೀ ಇಬ್ಬರು ರಕ್ತ ಸಂಬಂಧಿಗಳಾಗಿದ್ದು, ಇಬ್ಬರು ಕೂಡ ದೊಡ್ಡಪ್ಪ ಹಾಗೂ ಚಿಕ್ಕಪ್ಪನ ಮಕ್ಕಳು ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು ಮೂಲದ ಯುವತಿಯನ್ನು ಮುಂದಿಟ್ಟುಕೊಂಡು ಶ್ರೀಗಳ ವಿರುದ್ಧ ಸಂಚು ರೂಪಿಸಿದ್ದರು ಎಂಬ ಆರೋಪವಿದೆ. ಬಂಧಿತ ಯುವತಿ ಕೂಡ ಮೃತ್ಯುಂಜಯ ಶ್ರೀಗಳ ಹಳೆಯ ಶಿಷ್ಯೆ ಎಂದು ತಿಳಿದು ಬಂದಿದೆ.
ಪ್ರಕರಣದ ಸಂಬಂಧ ಸ್ವಾಮೀಜಿಯ 20 ಕ್ಕೂ ಹೆಚ್ಚು ವಿಡಿಯೋಗಳು ಪೊಲೀಸರಿಗೆ ಸಿಕ್ಕಿದ್ದು, ಈ ಬಗ್ಗೆಯೂ ಕೂಡ ತನಿಖೆ ನಡೆಯುತ್ತಿದೆ ಮತ್ತಷ್ಟು ಜನರ ಹೆಸರು ಹಾಗೂ ಮಾಹಿತಿ ಹೊರಬರುವ ನಿರೀಕ್ಷೆಯಿದೆ. ಪ್ರಕರಣದ ತನಿಖೆಗಾಗಿ ರಾಮನಗರ ಜಿಲ್ಲಾ ಪೊಲೀಸರು ವಿಶೇಷ ತಂಡವೊಂದನ್ನು ರಚಿಸಿಕೊಂಡಿದ್ದು, ಬೆಂಗಳೂರು ಸೇರಿದಂತೆ ಹಲವೆಡೆ ಹುಡುಕಾಟ ನಡೆಸಿದ್ದಾರೆ.
ಬಸವಲಿಂಗ ಶ್ರೀಗಳಿಗೆ ಹನಿಟ್ರಾಪ್ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಮೂಲದ ಯುವತಿ ಹಾಗೂ ಕಣ್ಣೂರು ಮಠದ ಶ್ರೀಗಳನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಈ ಇಬ್ಬರು ಸೇರಿಕೊಂಡು ಬಸವಲಿಂಗ ಶ್ರೀಗಳಿಗೆ ಹನಿಟ್ರಾಪ್ ಮಾಡಿದ್ದರು ಎನ್ನುವ ಆರೋಪ ಕೇಳಿಬಂದಿತ್ತು. ಇದೀಗ ಪೊಲೀಸರ ವಶದಲ್ಲಿರುವ ಕಣ್ಣೂರು ಮಠದ ಸ್ವಾಮೀಜಿ ಹಾಗೂ ಬಂಡೇಮಠದ ಸ್ವಾಮೀಜಿ ಡೆತ್ನೋಟ್ನಲ್ಲಿ ಉಲ್ಲೇಖಿಸಿರುವ ಸ್ವಾಮೀಜಿ ಒಬ್ಬರೇನಾ ಎನ್ನುವ ಬಗ್ಗೆ ಪೊಲೀಸರು ಯಾವುದೇ ಹೇಳಿಕೆ ನೀಡಿಲ್ಲ.
ಶ್ರೀ ಕಂಚುಗಲ್ ಬಂಡೇಮಠದ ಗುರು ಮಡಿವಾಳೇಶ್ವರ ಬಸವಲಿಂಗ ಸ್ವಾಮೀಜಿ ಸ್ವಾಮೀಜಿ(45) ಮಠದಲ್ಲೇ ನೇಣಿಗೆ ಶರಣಾಗಿದ್ದರು. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ನೇಣಿಗೆ ಶರಣಾಗಿದ್ದಾರೆ. ಸ್ವಾಮೀಜಿ ವಿರುದ್ಧ ಹನಿಟ್ರ್ಯಾಪ್ ನಡೆದಿದ್ದು, ಡೆತ್ನೋಟ್ನಲ್ಲಿ ಸಂಚಿನ ಬಗ್ಗೆ ಕುಂಚಗಲ್ ಬಂಡೆಮಠದ ಬಸವಲಿಂಗಶ್ರೀ ಸ್ವಾಮೀಜಿ ಬರೆದಿದ್ದಾರೆ. ಕುಂಚಗಲ್ ಸ್ವಾಮೀಜಿ ಕೆಳಗಿಳಿಸಲು ಮಾಸ್ಟರ್ ಪ್ಲಾನ್ ನಡೆದಿತ್ತು ಎನ್ನಲಾಗಿದ್ದು, ತನಿಖೆಯಿಂದ ಇನ್ನಷ್ಟು ಮಾಹಿತಿ ಹೊರಬರಬೇಕಾಗಿದೆ.
Karnataka Politics: ಮಹಿಳೆಯರ ಮೇಲೆ ಬಿಜೆಪಿಗರ ದರ್ಪ, ದೌರ್ಜನ್ಯ ಮಿತಿ ಮೀರುತ್ತಿದೆ – ಕಾಂಗ್ರೆಸ್
ಕಿವುಡ ಮತ್ತು ಮೂಕ ಸಿಬ್ಬಂದಿಗೆ ಉದ್ಯೋಗ ನೀಡುತ್ತಿದೆ ಈ ರೆಸ್ಟೋರೆಂಟ್: ಅದ್ಯಾವುದು ಗೊತ್ತಾ? | Watch Video
‘ರಸ್ತೆ ಅಪಘಾತದಲ್ಲಿ ಸಾಕು ನಾಯಿ ಗಾಯಗೊಳಿಸಿದರೆ ಅಪರಾಧವಲ್ಲ’ : ಹೈಕೋರ್ಟ್ ತೀರ್ಪು
‘ರಸ್ತೆ ಅಪಘಾತದಲ್ಲಿ ಸಾಕು ನಾಯಿ ಗಾಯಗೊಳಿಸಿದರೆ ಅಪರಾಧವಲ್ಲ’ : ಹೈಕೋರ್ಟ್ ತೀರ್ಪು