ಬೆಂಗಳೂರು : ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೇಲೂರು ಹೋಬಳಿಯ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ನಿವೃತ್ತ ಶಿಕ್ಷಕ ಮತ್ತು ವಕೀಲ ಎಂ ಮಹದೇವಯ್ಯಗೆ ಹೈಕೋರ್ಟ್ ಜಾಮೀನು ನೀಡಿದೆ.
ಅರ್ಜಿದಾರರು ಒಂದು ಲಕ್ಷ ರೂ ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಇಬ್ಬರ ಭದ್ರತಾ ಖಾತರಿ ಒದಗಿಸಬೇಕು, ಪೂರ್ವಾನುಮತಿ ಇಲ್ಲದೇ ವಿಚಾರಣಾಧಿನ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ತೆರಳುವಂತಿಲ್ಲ ಎಂದು ಸೂಚಿಸಿ ಹೈಕೋರ್ಟ್ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.
ಕಂಚುಗಲ್ ಬಂಡೇಮಠದ ಗುರು ಮಡಿವಾಳೇಶ್ವರ ಬಸವಲಿಂಗ ಸ್ವಾಮೀಜಿ ಸ್ವಾಮೀಜಿ(45) ಮಠದಲ್ಲೇ ನೇಣಿಗೆ ಶರಣಾಗಿದ್ದರು. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ನೇಣಿಗೆ ಶರಣಾಗಿದ್ದರು. ಸ್ವಾಮೀಜಿ ವಿರುದ್ಧ ಹನಿಟ್ರ್ಯಾಪ್ ನಡೆದಿದ್ದು, ಡೆತ್ನೋಟ್ನಲ್ಲಿ ಸಂಚಿನ ಬಗ್ಗೆ ಕುಂಚಗಲ್ ಬಂಡೆಮಠದ ಬಸವಲಿಂಗಶ್ರೀ ಸ್ವಾಮೀಜಿ ಬರೆದಿದ್ದಾರೆ. ಕುಂಚಗಲ್ ಸ್ವಾಮೀಜಿ ಕೆಳಗಿಳಿಸಲು ನಡೆದಿತ್ತು ಮಾಸ್ಟರ್ ಪ್ಲಾನ್ ನಡೆದಿದ್ದು, ಮಾಸ್ಟರ್ ಪ್ಲಾನ್ ಹಿಂದೆ ಇರೋ ವ್ಯಕ್ತಿ ಮತ್ತೋರ್ವ ಸ್ವಾಮೀಜಿ ಎನ್ನಲಾಗಿತ್ತು. ಸಹೋದರ ಸಂಬಂಧಿಯಾಗಿದ್ದಂತ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿಯೇ ಹನಿಟ್ರ್ಯಾಫ್ ಮಾಡಿಸಿರೋದಾಗಿ ತಿಳಿದು ಬಂದಿತ್ತು. ಈ ಸಂಬಂಧ ಪೊಲೀಸರು ಮೃತ್ಯುಂಜಯ ಶ್ರೀಗಳು ಹಾಗೂ ಅವರ ಜೊತೆಗೆ ಹನಿಟ್ರ್ಯಾಪ್ ಮಾಡಿದ್ದಂತ ಯುವತಿ ನೀಲಾಂಬಿಕೆಯನ್ನು ಬಂಧಿಸಿದ್ದರು.
Red wine : ‘ಕೆಂಪು ವೈನ್’ ಕುಡಿಯುವುದು ಆರೋಗ್ಯಕ್ಕೆ ಪ್ರಯೋಜನಕಾರಿಯೇ ? ಇಲ್ಲಿದೆ ತಜ್ಞರ ಸಲಹೆಗಳು
BIGG NEWS : ಪ್ರಧಾನಿ ಮೋದಿ ತಾಯಿ ಆದಷ್ಟು ಬೇಗ ಚೇತರಿಸಿಕೊಳ್ಳಲಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾರೈಕೆ