ರಾಮನಗರ : ಕಂಚುಗಲ್ ಬಂಡೇಮಠದ `ಬಸವಲಿಂಗ ಸ್ವಾಮೀಜಿ’ ಆತ್ಮಹತ್ಯೆ ಪ್ರಕರಣ ಹತ್ತು ಹಲವು ಅನುಮಾನಗಳಿಗೆ ಎಡೆಮಾಡಿಕೊಡುತ್ತಿದೆ. ಸ್ವಾಮೀಜಿ ಡೆತ್ ನೋಟ್ ನೋಡಿದ ಪೊಲೀಸರು ವಿವಿಧ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ. ಆದರೆ ಸ್ವಾಮೀಜಿ ಆತ್ಮಹತ್ಯೆ ರಹಸ್ಯ ಮಾತ್ರ ಬಯಲಾಗಿಲ್ಲ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಂಚುಗಲ್ ಬಂಡೇಮಠದ ಬಸವಲಿಂಗಶ್ರೀಗಳು ಮಠದ ಆವರಣದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಮುಖಂಡರೊಬ್ಬರ ಬೆದರಿಕೆಗೆ ಹೆದರಿ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ರಾ ಎನ್ನುವ ಶಂಕೆ ವ್ಯಕ್ತವಾಗಿದೆ. ಕಳೆದ 4 ದಿನಗಳಿಂದ ನಿರಂತವಾಗಿ ವಿಡಿಯೋ ತೋರಿಸಿ ಬಸವಲಿಂಗ ಸ್ವಾಮೀಜಿಗೆ ಬ್ಲಾಕ್ಮೇಲ್ ಮಾಡಲಾಗಿದೆ ಎನ್ನಲಾಗುತ್ತಿದೆ.
ಇದರ ನಡುವೆ ಬಸವಲಿಂಗ ಶ್ರೀ’ ಆತ್ಮಹತ್ಯೆಯ ಹಿಂದೆ ಯುವತಿಯೊಬ್ಬಳ ಕರಿ ನೆರಳಿತ್ತು ಎಂಬ ಅನುಮಾನ ದಟ್ಟವಾಗಿದೆ. ಹೌದು, ವಿಡಿಯೋವನ್ನು ಇಟ್ಟುಕೊಂಡು ಯುವತಿ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್ ಮಾಡಿದ್ದಳು ಎಂಬ ಮಾತು ಕೇಳಿಬರುತ್ತಿದೆ. ಇದರ ಹಿಂದೆ ರಾಜಕೀಯ ಮುಖಂಡನೊಬ್ಬನ ಕೈವಾಡ ಇದೆ ಎಂಬ ಅನುಮಾನ ಕೂಡ ದಟ್ಟವಾಗಿದೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಂಚುಗಲ್ ಬಂಡೇಮಠದ ಬಸವಲಿಂಗಶ್ರೀಗಳು ಮಠದ ಆವರಣದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಮುಖಂಡರೊಬ್ಬರ ಬೆದರಿಕೆಗೆ ಹೆದರಿ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ರಾ ಎನ್ನುವ ಶಂಕೆ ವ್ಯಕ್ತವಾಗಿದೆ. ಕಳೆದ 4 ದಿನಗಳಿಂದ ನಿರಂತವಾಗಿ ವಿಡಿಯೋ ತೋರಿಸಿ ಬಸವಲಿಂಗ ಸ್ವಾಮೀಜಿಗೆ ಬ್ಲಾಕ್ಮೇಲ್ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿಗಳ ಆತ್ಮಹತ್ಯೆ ಹಿಂದೆ ಷಡ್ಯಂತ್ರ ನಡೆದಿದೆ ಎನ್ನಲಾಗುತ್ತಿದೆ. ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿರೋ ಸ್ಥಳದಲ್ಲೇ ಡೆತ್ ನೋಟ್ ಪತ್ತೆಯಾಗಿದೆ. ಸ್ವಾಮೀಜಿ ಬರೆದಿರೋ ಡೆತ್ ನೋಟ್ ವಶಕ್ಕೆ ಪಡೆದು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಡೆಮಠ ಸ್ವಾಮೀಜಿ ಸಾವಿನ ಹಿಂದೆ ಯುವತಿ ಇದ್ದರಾ..? ವಿಡಿಯೋ ಕಾಲ್ನಲ್ಲಿ ಬೆದರಿಕೆ ಹಾಕಿದವರು ಯಾರು ಎಂಬುದರ ಬಗ್ಗೆ ತನಿಖೆಯಿಂದ ಗೊತ್ತಾಗಬೇಕಿದೆ.
BIG NEWS: ‘ದೀಪಾವಳಿ ಹಬ್ಬ’ದಂದೇ ‘ಸಚಿವ ಡಾ.ಕೆ.ಸುಧಾಕರ್’ ಮಾನವೀಯತೆಯ ಮಹತ್ವದ ನಿರ್ಧಾರ: 9 ಮಕ್ಕಳನ್ನು ದತ್ತು