ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿನ ಒಬ್ಬ ಸದಸ್ಯರನ್ನು ಆಯ್ಕೆ ಮಾಡಲು ಉಪ ಚುನಾವಣೆಯನ್ನು ಜುಲೈ 12 ರಂದು ನಿಗದಿಪಡಿಸಲಾಗಿತ್ತು, ಜುಲೈ 5 ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದ್ದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಬಸನಗೌಡ ಬಾದರ್ಲಿ ಅವರು ಮಾತ್ರ ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದು, ಸದರಿ ಅಭ್ಯರ್ಥಿಯು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆಂದು ಚುನಾವಣಾಧಿಕಾರಿ, ಕರ್ನಾಟಕ ವಿಧಾನಪರಿಷತ್ ಉಪ ಚುನಾವಣೆ-2024 ಹಾಗೂ ಕಾರ್ಯದರ್ಶಿಗಳು ಕರ್ನಾಟಕ ವಿಧಾನ ಸಭೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.