ಬೆಂಗಳೂರು : ಬಿಜೆಪಿಯ ಹೈಕಮಾಂಡ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರ್ಯವೈಖರಿ ಇಷ್ಟವಾಗಿದ್ದು, ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸುವ ಸಾಧ್ಯತೆಯಿದೆ ಎಂದು ಬಿಜೆಪಿಯ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
BIGG NEWS: ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ನೋಟಿಸ್ ಜಾರಿ; ಅರುಣ್ ಸಿಂಗ್
ಸಂದರ್ಶವೊಂದರಲ್ಲಿ ಮಾತನಾಡಿದ ಅರುಣ್ ಸಿಂಗ್, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೈಕಮಾಂಡ್ ಘೋಷಿಸುವ ಸಾಧ್ಯತೆ ಇದೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಇರಿಸಿಕೊಂಡಿರುವ ಗುರಿ 150ಕ್ಕಿಂತಲೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಲಿದೆ. ಮೋದಿ ಮತ್ತು ಬೊಮ್ಮಾಯಿ ಆಡಳಿತ ಕೊಟ್ಟಿರುವ ಜನಪರ ಯೋಜನೆಗಳಿಗೆ ರಾಜ್ಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಅವರು ತಿಳಿಸಿದರು.