ಬೆಳಗಾವಿ: ಬಸವರಾಜ ಹೊರಟ್ಟಿ ರಾಜೀನಾಮೆಯಿಂದಾಗಿ ವಿಧಾನ ಪರಿಷತ್ ಸಭಾಪತಿ ಸ್ಥಾನ ತೆರವಾಗಿತ್ತು. ಈ ಸ್ಥಾನಕ್ಕೆ ಡಿ.21ರಂದು ಚುನಾವಣೆ ಘೋಷಣೆಯಾಗಿದೆ. ಇಂತಹ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.
ವಿಧಾನಪರಿಷತ್ ಸಭಾಪತಿ ಚುನಾವಣೆ ಸಂಬಂಧ, ಪರಿಷತ್ ಸಭಾಂಗಣದಲ್ಲಿ ಇಂದು ಬಿಜೆಪಿ ಸದಸ್ಯರ ಸಭೆ ನಡೆಯಿತು. ಈ ಸಭೆಯಲ್ಲಿ ಬಸವರಾಜ ಹೊರಟ್ಟಿ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗಿಯಾಗಿದ್ದರು.
ಇಂದಿನ ಬಿಜೆಪಿ ಸದಸ್ಯರ ಸಭೆಯಲ್ಲಿ ಪರಿಷತ್ ಚುನಾವಣೆಗೆ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿಯನ್ನು ಆಯ್ಕೆ ಮಾಡಲಾಗಿದೆ. ಹೀಗಾಗಿ ಅವರು ನಾಳೆ ಮಧ್ಯಾಹ್ನ ಬಿಜೆಪಿ ಮುಖಂಡರೊಂದಿಗೆ ತೆರಳಿ ಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರವನ್ನು ಸಲ್ಲಿಸಲಿದ್ದಾರೆ.
ಅಂದಹಾಗೇ ಜೆಡಿಎಸ್ ಪಕ್ಷಕ್ಕೆ ಗುಡ್ ಬೈ ಹೇಳಿ, ಬಿಜೆಪಿ ಸೇರ್ಪಡೆಯಾದ ಬಳಿಕ, ಪರಿಷತ್ ಸಭಾಪತಿ ಸ್ಥಾನಕ್ಕೂ ಹೊರಟ್ಟಿಯವರು ರಾಜೀನಾಮೆ ನೀಡಿದ್ದರು. ಈ ಸಭಾಪತಿ ಸ್ಥಾನಕ್ಕೆ ಡಿಸೆಂಬರ್ 21ರಂದು ಚುನಾವಣೆ ನಡೆಯಲಿದೆ.
BREAKING NEWS: ಬೆಂಗಳೂರಿನಲ್ಲಿ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು