ಸುಭಾಷಿತ :

Friday, April 3 , 2020 8:01 AM

ಆರೋಪಿ ಯಾವುದೇ ಸಂಘಟನೆಯವನಾಗಿದ್ದರೂ ಕಠಿಣ ಕ್ರಮ : ಗೃಹ ಸಚಿವ ಬೊಮ್ಮಾಯಿ


Wednesday, January 22nd, 2020 11:32 am

ಬೆಂಗಳೂರು : ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯ ರಾವ್ ಬೆಂಗಳೂರು ಡಿಜಿ ಕಚೇರಿಗೆ ಬಂದು ಶರಣಾಗಿದ್ದಾನೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆರೋಪಿ ಯಾವುದೇ ಸಂಘಟನೆಯವನಾಗಿದ್ದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಪ್ರಕರಣದಲ್ಲಿ ಪೊಲೀಸರು ತೀವ್ರಗತಿಯಲ್ಲಿ ಕೆಲಸ ಮಾಡಿದ್ದಾರೆ. ಇದು ನಮ್ಮ ಪೊಲೀಸರ ದಕ್ಷತೆ ಮತ್ತು ಪ್ರಾಮಾಣಿಕತೆ, ಯಾರೂ ಕೂಡ ಪೊಲೀಸರ ಬಗ್ಗೆ ಅನಾವಶ್ಯಕವಾಗಿ ಟೀಕೆ ಮಾಡುವುದು ಸರಿಯಲ್ಲ. ಪೊಲೀಸರ ನೈತಿಕತೆ ಕುಗ್ಗುವ ಕೆಲಸವನ್ನು ಯಾರೂ ಸಹ ಮಾಡಬಾರದು ಎಂದರು.

ಇನ್ನು ಶರಣಾಗಿರುವ ಅಪರಾಧಿ ಯಾವುದೇ ಸಂಘಟನೆಯವನಾದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ. ನಮ್ಮ ಪೊಲೀಸರು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಸಂಘಟನೆ ಜೊತೆ ಸಂಪರ್ಕ ವಿಚಾರವಾಗಿ, ತನಿಖೆ ಬಳಿಕ ಅದೆಲ್ಲಾ ಬಹಿರಂಗ ಆಗುತ್ತೆ. ಕೇಂದ್ರದ ತಂಡ ಈಗಾಗಲೇ ಬಂದು ತನಿಖೆ ಮಾಡುತ್ತಿದೆ ಎಂದು ಮಾಹಿತಿ ನೀಡಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions