ಬಳ್ಳಾರಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದ ಬೆನ್ನಲ್ಲೇ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.
ಡಿ ಕಂಪನಿ ಎಂಬ ಟ್ವಿಟರ್ ಖಾತೆಯಲ್ಲಿ ವಿಡಿಯೋಂದನ್ನು ಶೇರ್ ಮಾಡಿರುವ ಫ್ಯಾನ್ಸ್, ಡೆವಿಲ್ ಈಸ್ ಬ್ಯಾಕ್ ಎಂದು ವಿಡಿಯೋವೊಂದನ್ನು ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ. ಈ ನಡುವೆ ದರ್ಶನ್ ಬಿಡುಗಡೆ ಸುದ್ದಿ ತಿಳಿಯುತ್ತಿದ್ದಂತೆ ಸಾವಿರಾರು ಅಭಿಮಾನಿಗಳು ಬಳ್ಳಾರಿ ಜೈಲಿನ ಮುಂಭಾಗ ಕಾದು ಕುಳಿತಿದ್ದಾರೆ.
The Devil Is Back..For Deepavali 131 Days..Await Comes To an End..#Devil #challengingstardarshan #DBoss pic.twitter.com/QPd3hHKCmO
— D Company(R)Official (@Dcompany171) October 30, 2024
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಇನ್ನು ನಟ ದರ್ಶನ್ ಬಿಡುಗಡೆ ವಿಷಯ ತಿಳಿಯುತ್ತಿದ್ದ ಬಳ್ಳಾರಿ ಜೈಲಿನ ಮುಂದೆ ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಕಾದು ಕುಳಿತಿದ್ದಾರೆ.
ಈ ನಡುವೆ ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಆರೋಪಿ ಪವಿತ್ರಾಗೌಡ ನಟ ದರ್ಶನ್ ಗೆ ಜಾಮೀನು ಸಿಕ್ಕಿರುವುದರಿಂದ ಸಂತಸವಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾಗೌಡ ಸಹ ಖೈದಿಗಳ ಜೊತೆಗೆ ದರ್ಶನ್ ಗೆ ಬೇಲ್ ಸಿಕ್ಕಿರುವುದು ಖುಷಿಯಾಗಿದೆ ಎಂದು ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದರು. ಅವರು ತಮ್ಮ ವಕೀಲರ ಮೂಲಕ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ನಡೆಸಿತು. ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು ವಾದಿಸಿದರು.