ಬೆಂಗಳೂರು: ನಗರದಲ್ಲಿ ಗುಣಮಟ್ಟದ ನೀರು ಪೂರೈಕೆ ಮಾಡಲು ಟ್ಯಾಂಕರ್ ಮಾಲೀಕರಿಂದ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಖಾಸಗಿ ಟ್ಯಾಂಕರ್ ಮಾಲೀಕರು ಜಲಮಂಡಳಿಗೆ ಬಾಡಿಗೆ ಆಧಾರದಲ್ಲಿ ಟ್ಯಾಂಕರ್ ನೀಡಲು ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಖಾಸಗಿ ಟ್ಯಾಂಕರ್‌ಗಳು ದರ ಏರಿಕೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳಾಗಿವೆ. ಜಲಮಂಡಳಿಯ ಬಳಿ ಸಾಕಷ್ಟು ಪ್ರಮಾಣದಲ್ಲಿ ನೀರು ಲಭ್ಯವಿದೆ.
110 ಹಳ್ಳಿಗಳ ವ್ಯಾಪ್ತಿಯಲ್ಲಿ ಟ್ಯಾಂಕರ್ ನೀರನ್ನು ಅವಲಂಬಿಸಿರುವವರಿಗೆ ಗುಣಮಟ್ಟದ ನೀರನ್ನು ಒದಗಿಸುವುದು ನಮ್ಮ ಮುಖ್ಯ ಗುರಿಯಾಗಿದೆ. ಈ ನಿಟ್ಟಿನಲ್ಲಿ ಖಾಸಗಿ ಟ್ಯಾಂಕರ್‌ಗಳ ಮಾಲೀಕರು bwssb.karnataka.gov.in ನಲ್ಲಿ ಏಪ್ರಿಲ್ 10ರ ಒಳಗಾಗಿ ನೋಂದಣಿ ಮಾಡಿಕೊಳ್ಳಬಹುದು ಎಂದು ಜಲಮಂಡಳಿ ಅಧ್ಯಕ್ಷರಾದ ರಾಮ್‌ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9901888338 ಸಂಪರ್ಕಿಸಬಹುದು.
ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಖಾಸಗಿ ಟ್ಯಾಂಕರ್‌ಗಳು ದರ ಏರಿಕೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳಾಗಿವೆ. ಜಲಮಂಡಳಿಯ ಬಳಿ ಸಾಕಷ್ಟು ಪ್ರಮಾಣದಲ್ಲಿ ನೀರು ಲಭ್ಯವಿದೆ. 110 ಹಳ್ಳಿಗಳ ವ್ಯಾಪ್ತಿಯಲ್ಲಿ ಟ್ಯಾಂಕರ್ ನೀರನ್ನು ಅವಲಂಬಿಸಿರುವವರಿಗೆ ಗುಣಮಟ್ಟದ ನೀರನ್ನು ಒದಗಿಸುವುದು ನಮ್ಮ ಮುಖ್ಯ ಗುರಿಯಾಗಿದೆ. ಈ ನಿಟ್ಟಿನಲ್ಲಿ ಖಾಸಗಿ… pic.twitter.com/YXdV2Kpx9U
— DIPR Karnataka (@KarnatakaVarthe) April 4, 2025