ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಇಂದು ಬಿಬಿಎಂಪಿಯ ಎ ಆರ್ ಓ ಪ್ರಸನ್ನ ಕುಮಾರ್ ಅವರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 40 ಲಕ್ಷ ದಂಡವನ್ನು ಕೋರ್ಟ್ ವಿಧಿಸಿದೆ.
ಇಂದು ಪ್ರಕರಣ ಸಂಬಂಧದ ತೀರ್ಪು ಪ್ರಕಟಿಸಿರುವಂತ ಬೆಂಗಳೂರಿನ ಸಿಸಿ ಹೆಚ್ 24ರ ನ್ಯಾಯಾಧೀಶ ಲಕ್ಷ್ಮೀನಾರಾಯಣ ಭಟ್ ಅವರು, ಶೇ.61.69ರಷ್ಟು ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದಲ್ಲಿ ನಾಲ್ಕು ವರ್ಷ ಜೈಲು, 40 ಲಕ್ಷ ದಂಡವನ್ನು ವಿಧಿಸಿದ್ದಾರೆ.
ಶಬರಿಮಲೆಗೆ ತೆರಳೋ ಭಕ್ತರಿಗೆ ಗುಡ್ ನ್ಯೂಸ್: ಬೆಳಗಾವಿಯಿಂದ ಕೊಲ್ಲಂಗೆ ವಿಶೇಷ ರೈಲುಗಳ ಸಂಚಾರ
ಅಂದಹಾಗೇ ಬಿಬಿಎಂಪಿಯ ಎ ಆರ್ ಓ ಪ್ರಸನ್ನ ಕುಮಾರ್ ಅವರ ನಿವಾಸ, ಕಚೇರಿಯ ಮೇಲೆ 2013ರಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಈ ದಾಳಿಯ ವೇಳೆಯಲ್ಲಿ ಆದಾಯ ಮೀರಿ ಆಸ್ತಿ ಗಳಿಸಿರೋದಾಗಿ ಪತ್ತೆಯಾಗಿತ್ತು. 38,69,310 ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಸಲ್ಲಿಸಲಾಗಿತ್ತು. ಶೇ.61.69ರಷ್ಟು ಆದಾಯ ಮೀರಿ ಆಸ್ತಿ ಗಳಿಸಿದ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿಯೇ ಇಂದು ನಾಲ್ಕು ವರ್ಷ ಜೈಲು, 40 ಲಕ್ಷ ದಂಡವನ್ನು ಕೋರ್ಟ್ ವಿಧಿಸಿದೆ.
ಬಾಡೂಟದಿಂದ ಮತಕ್ಷೇತ್ರಕ್ಕೆ ಮಾಡಿದ ವಂಚನೆ ಜನರು ಮರೆಯಲ್ಲ: ಸಚಿವ ಶ್ರೀರಾಮುಲು ವಿರುದ್ಧ ಡಾ.ಯೋಗೇಶ್ ಬಾಬು ಕಿಡಿ