ಬೆಂಗಳೂರು: ಡಿ.31ರ ವರ್ಷದ ಕೊನೆಯ ದಿನವೂ ಬಿಬಿಎಂಪಿ ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಆರ್. ರವರ ನಿರ್ದೇಶನದಂತೆ ಪೂರ್ವ ವಲಯದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಹಾಗೂ ಅನಧಿಕೃತವಾಗಿ ಅಳವಡಿಸಿದ್ದ ಫ್ಲೆಕ್ಸ್ ಬ್ಯಾನರ್ ಗಳನ್ನು ನಿರಂತರವಾಗಿ ತೆರವುಗೊಳಿಸಲಾಗುತ್ತಿದೆ.
ಅಂಗಡಿ-ಮುಂಗಟ್ಟುಗಳು ಹಾಗೂ ಬೀದಿಬದಿ ವ್ಯಾಪಾರಿಗಳು ಪಾದಚಾರಿ ಮಾರ್ಗವನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವುದು ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ.
ಪಾದಚಾರಿ ಒತ್ತುವರಿ ತೆರವು:
ಅದರಂತೆ ಇಂದು ಪೂರ್ವ ವಲಯದ ಸಿ. ವಿ. ರಾಮನ್ ನಗರ ವ್ಯಾಪ್ತಿಯ ವಾರ್ಡ್ ಸಂಖ್ಯೆ:109, ಹಳೇ ವಾರ್ಡ್ ಸಂಖ್ಯೆ: 50 ರ ಕಸ್ತೂರಿನಗರದ 2ನೇ ಮುಖ್ಯರಸ್ತೆಯಲ್ಲಿ ಪಾದಚಾರಿ ರಸ್ತೆಗಳ ಮೇಲಿದ್ದ ತಳ್ಳುಗಾಡಿಗಳನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಯಿತು.
ಫ್ಲೆಕ್ಸ್ ಬ್ಯಾನರ್ ಗಳ ತೆರವು
ಸಿ. ವಿ. ರಾಮನ್ ನಗರ ವ್ಯಾಪ್ತಿಯ ವಾರ್ಡ್ ಸಂಖ್ಯೆ:109, ಹಳೇ ವಾರ್ಡ್ ಸಂಖ್ಯೆ: 50 ರ ಕಸ್ತೂರಿನಗರದ 2ನೇ ಮುಖ್ಯ ರಸ್ತೆಯಲ್ಲಿ ಅನಧಿಕೃತವಾಗಿ ಅಳವಡಿಸಲಾಗಿದ್ದ ಬ್ಯಾನರ್ ಗಳನ್ನು ಸಹ ತೆರವುಗೊಳಿಸಲಾಯಿತು.
ಈ ವೇಳೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ ಅಭಿಯಂತರರು, ಆರೋಗ್ಯ ಪರಿವೀಕ್ಷಕರು ಸೇರಿದಂತೆ ಇನ್ನಿತರರು ಹಾಜರಿದ್ದರು.