ಬೆಂಗಳೂರು: ನಗರದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಡೆಂಗ್ಯೂಗೆ ಕಾರಣವಾಗಿರುವಂತ ಸೊಳ್ಳೆ ನಿಯಂತ್ರಣಕ್ಕಾಗಿ, ಸೊಳ್ಳೆ ಹೆಚ್ಚಿರುವಂತ ಬೆಂಗಳೂರಿನ ಏರಿಯಾ ಜನರಿಗೆ ಬಿಬಿಎಂಪಿಯಿಂದಲೇ ಡೀಟ್ ಕ್ರೀಮ್, ನೀಮ್ ಆಯಿಲ್ ವಿತರಣೆ ಮಾಡಲಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆಯಾ ವಲಯಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಬಿ.ಎಸ್.ಡಬ್ಲ್ಯೂ.ಎಂ.ಎಲ್ ನಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಪ್ರತಿನಿತ್ಯ ಸರಾಸರಿ 150 ರಿಂದ 160 ಡೆಂಘೀ ಪ್ರಕರಣಗಳು ಕಂಡುಬರುತ್ತಿದ್ದು, ಜುಲೈ 1 ರಿಂದ ನಿನ್ನೆಯವರೆಗೆ 3304 ಪ್ರಕರಣಗಳು ವರದಿಯಾಗಿವೆ. ಈ ಸಂಬಂಧ ಎಲ್ಲಾ ವಲಯಗಳಲ್ಲಿ ಡೆಂಘೀ ನಿಯಂತ್ರಣಕ್ಕಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸೂಚಿಸಲಾಯಿತು.
ವಲಯ ಆಯುಕ್ತರು ಡೆಂಘೀ ನಿಯಂತ್ರಿಸುವ ಸಂಬಂಧ ಆರೋಗ್ಯ ವಿಭಾಗದ ಅಧಿಕಾರಿಗಳ ಜೊತೆ ಪ್ರತಿನಿತ್ಯ ಸಭೆ ನಡೆಸಿ ಮೇಲ್ವಿಚಾರಣೆ ಮಾಡಬೇಕು. ಆಯಾ ವಲಯ ವ್ಯಾಪ್ತಿಯಲ್ಲಿ ಹೆಚ್ಚು ಡೆಂಘೀ ಪ್ರಕರಣಗಳು ಕಂಡುಬರುವ ಹಾಟ್ ಸ್ಪಾಟ್ ಸ್ಥಳಗಳಲ್ಲಿ ನಾಗರೀಕರಿಗೆ ಸೊಳ್ಳೆ ಕಚ್ಚದಂತೆ ಡೀಟ್ ಕ್ರೀಮ್ ಹಾಗೂ ನೀಮ್ ಆಯಿಲ್ ವಿತರಿಸಬೇಕು. ಜೊತೆಗೆ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸಲು ಹೆಚ್ಚಾಗಿ ಫಾಂಗಿಂಗ್ ಹಾಗೂ ಔಷಧಿ ಸಿಂಪಡಣೆ ಮಾಡಬೇಕೆಂದು ಸೂಚಿಸಿದರು.
ಆಯಾ ವಲಯ ಹಿರಿಯ ಅಧಿಕಾರಿಗಳು ಆಸ್ಪತ್ರೆಗಳಿಗೆ ಭೇಟಿ ನೀಡಿ ಎಷ್ಟು ದರ ವಿಧಿಸುತ್ತಿದ್ದಾರೆ, ಎಷ್ಟು ಪ್ರಕರಣಗಳು ಕಂಡುಬರುತ್ತಿವೆ ಎಂಬುದನ್ನು ಪರಿಶೀಲಿಸಬೇಕು. ಸರ್ಕಾರಿ ಆದೇಶವನ್ನು ಉಲ್ಲಂಘಿಸಿ ಹೆಚ್ಚು ದರ ವಿಧಿಸುವ ಆಸ್ಪತ್ರೆಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನುಗಳ ಪೋಡಿ, ದುರಸ್ತಿ ಪಾರದರ್ಶಕತೆಗೆ ‘ನೂತನ ತಂತ್ರಾಂಶ’
ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ಧರಾಮಯ್ಯ ರಾಜ್ಯಪಾಲರ ಭೇಟಿ: ಪ್ರಸ್ತುತ ವಿದ್ಯಮಾನಗಳ ಬಗ್ಗೆ ಚರ್ಚೆ, ವರದಿ ಸಾಧ್ಯತೆ