ಬೆಂಗಳೂರು : ವಿಧಾನಸಭಾ ಚುನಾವಣೆ ಬಳಿಕವೇ ಬಿಬಿಎಂಪಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಸರ್ಕಾರದ ವಾರ್ಡ್ ವಾರು ಮೀಸಲು ನಿಗದಿಗೆ ಮತ್ತೆ ಸರ್ಕಾರ ಮೂರು ತಿಂಗಳು ಕಾಲಾವಕಾಶ ಕೋರಿ ಸರ್ಕಾರ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. 2022 ರ ಡಿಸೆಂಬರ್ ಅಂತ್ಯದೊಳಗೆ ಪಾಲಿಕೆಗೆ ಚುನಾವಣೆ ನಡೆಸಬೇಕೆಂದು ಏಕಸದಸ್ಯ ಪೀಠ ಹೊರಡಿಸಿದ್ದ ಅದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದೆ.
ಬಿಬಿಎಂಪಿಯ ವಾರ್ಡ್ ಗಳಿಗೆ ಮೀಸಲಾತಿಯನ್ನು ನಿಗದಿಪಡಿಸಲು ಮೂರು ತಿಂಗಳು ಕಾಲಾವಕಾಶ ನೀಡಬೇಕೆಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮಧ್ಯಂತರ ಅರ್ಜಿ ಸಲ್ಲಿಸಿದೆ.ಡಿಸೆಂಬರ್ 30 ರೊಳಗೆ ಬಿಬಿಎಂಪಿ ಚುನಾವಣೆ ನಡೆಸಬೇಕು ಎಂದು ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಗೆ ಸೂಚನೆ ನೀಡಿತ್ತು, ಜೊತೆಗೆ ನ.30 ರೊಳಗೆ ಮೀಸಲಾತಿ ಹೊರಡಿಸುವಂತೆ ಸರ್ಕಾರಕ್ಕೆ ಆದೇಶಿಸಿತ್ತು.ಇದೀಗ ರಾಜ್ಯ ಸರ್ಕಾರದ ಅಟ್ವೊಕೇಟ್ ಜನರಲ್ ಅವರು ಮಂಗಳವಾರ ಹೈಕೋರ್ಟ್ ಗೆ ಕಾಲಾವಕಾಶ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.
‘ಕಾಂತಾರ’ ಸಿನಿಮಾ ವಿವಾದಾತ್ಮಕ ಹೇಳಿಕೆ : ನಟ ಚೇತನ್ ವಿರುದ್ಧದ ‘FIR’ ರದ್ದತಿಗೆ ಹೈಕೋರ್ಟ್ ನಕಾರ
ನ.27 ರವರೆಗೂ ಹಲವು ಜಿಲ್ಲೆಗಳಲ್ಲಿ ಭಾರೀ ‘ಮಳೆ’ ಮುನ್ನೆಚ್ಚರಿಕೆ : ಹವಾಮಾನ ಇಲಾಖೆ ಮುನ್ಸೂಚನೆ|Rain Alert Karnataka