ಬೆಂಗಳೂರು: ಇಂದು ಕೆಪಿಸಿಸಿ ಕಚೇರಿಯಲ್ಲಿ ಬಿಬಿಎಂಪಿ ಚುನಾವಣೆ ( BBMP Election ) ಸಂಬಂಧ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಬಿಜೆಪಿ ಸರ್ಕಾರದ ವೈಫಲ್ಯಗಳ ವಿರುದ್ಧ ಚಾರ್ಜ್ ಶೀಟ್ ಸಂಗ್ರಹಿಸಿ, ಸಿದ್ಧಪಡಿಸೋದಕ್ಕೆ ಕೆಪಿಸಿಸಿ ( KPCC ) ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ( Congress Party ) ಬಿಬಿಎಂಪಿ ಪ್ರಣಾಳಿಕೆ ಸಮಿತಿ ಸಭೆ ನಡೆಸಲಾಯಿತು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಮ್ಮುಖದಲ್ಲಿ ನಡೆಯುತ್ತಿರುವ ಸಭೆ ನಡೆಯಿತು. ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪಸ್ರಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗರೆಡ್ಡಿ, ಸಲೀಂ ಅಹ್ಮದ್, ಧ್ರುವನಾರಾಯಣ್, ಬಿಬಿಎಂಪಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಪ್ರೊ ಎಂ.ಬಿ ರಾಜೀವಗೌಡ, ಸಂಚಾಲಕ ಮಂಸೂರ್ ಅಲಿ ಖಾನ್, ನಿವೃತ ಐಎಎಸ್ ಅಧಿಕಾರಿ ಸಿದ್ದಯ್ಯ,ಪ್ರೊ ರಾಮಕೃಷ್ಣ, ಎ.ಎನ್ ನಟರಾಜ್ ಗೌಡ, ಭವ್ಯ ನರಸಿಂಹಮೂರ್ತಿ ಸೇರಿದಂತೆ ಸಮಿತಿ 33 ಜನ ಸಭೆಯಲ್ಲಿ ಭಾಗಿಯಾಗಿದ್ದರು.
ಇಂದಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಬಿಬಿಎಂಪಿ ಪ್ರಣಾಳಿಕಾ ಸಮಿತಿ ಸಭೆಯಲ್ಲಿ ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಚಾರ್ಜ್ ಶೀಟ್ ಸಂಗ್ರಹಿಸೋ ನಿರ್ಧಾರವನ್ನು ಕೈಗೊಳ್ಳಲಾಗಿದೆ. ರಸ್ತೆಗುಂಡಿ, ಆರೋಗ್ಯ ಸಮಸ್ಯೆ ಸೇರಿದಂತೆ ಬೆಂಗಳೂರಿಗೆ ಸಂಬಂಧಿಸಿದ ಬಿಜೆಪಿ ವೈಫಲ್ಯಗಳನ್ನ ಜನರ ಮುಂದೆ ತೆಗೆದುಕೊಂಡು ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ. 15 ದಿನಗಳಲ್ಲಿ ಚಾರ್ಜ್ ಶೀಟ್ ರೆಡಿ ಮಾಡಿ ಮನೆ ಮನೆಗೆ ತಲುಪಿಸಲು ಸಿದ್ಧತೆಯನ್ನು ಕೈಗೊಳ್ಳೋ ನಿರ್ಧಾರಕ್ಕೆ ಬರಲಾಗಿದೆ. ಚಾರ್ಜ್ ಶೀಟ್ ಬಳಿಕ ಕಾಂಗ್ರೆಸ್ ಆಡಳಿತ ಬಂದರೆ ಬೆಂಗಳೂರಿಗೆ ನೀಡಬಹುದಾದ ಕೊಡುಗೆಗಳ ಬಗ್ಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡೋ ಚರ್ಚೆ ಕೂಡ ನಡೆಸಲಾಯಿತು.
ಕರ್ನಾಟಕದಲ್ಲಿ 21 ದಿನ ‘ಭಾರತ್ ಜೋಡೋ ಯಾತ್ರೆ’ ಸಾಗಲಿದೆ – ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್