ನವದೆಹಲಿ: ಬಿಬಿಎಂಪಿ ಚುನಾವಣೆ ( BBMP Election ) ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ( Supreme Court ) ಸಲ್ಲಿಕೆಯಾಗಿದ್ದಂತ ಅರ್ಜಿಯನ್ನು, ಇಂದು ಮತ್ತೆ ಡಿಸೆಂಬರ್ ಮೊದಲ ವಾರಕ್ಕೆ ಮುಂದೂಡಿಕೆ ಮಾಡಿದೆ.
ಬಿಬಿಎಂಪಿ ಚುನಾವಣೆ ಸದ್ಯದಲ್ಲೇ ಘೋಷಣೆ ಆಗಲಿದೆ ಎಂದು ಹೇಳಲಾಗುತ್ತಿತ್ತು. ಸುಪ್ರೀಂ ಕೋರ್ಟ್ ಕೂಡ ಚುನಾವಣೆಗೆ ಗ್ರೀನ್ ಸಿಗ್ನಲ್ ನೀಡಿತ್ತು. ಆದ್ರೇ ಇದುವರೆಗೆ ಚುನಾವಣೆ ಘೋಷಣೆಯಾಗಿರಲಿಲ್ಲ.
BIGG NEWS ; ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ; ಮೂರು ಕಂತುಗಳಲ್ಲಿ ಬಾಕಿ ಪಾವತಿ |7th Pay Commission
ಇಂದು ಬಿಬಿಎಂಪಿ ಚುನಾವಣೆ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದಂತ ಅರ್ಜಿಯ ವಿಚಾರಣೆಯನ್ನು ನ್ಯಾಯಪೀಠವು ಕೈಗೆತ್ತಿಕೊಂಡು, ಮತ್ತೆ ಡಿಸೆಂಬರ್ ಮೊದಲ ವಾರಕ್ಕೆ ಮುಂದೂಡಿಕೆ ಮಾಡಿದೆ. ಹೀಗಾಗಿ ಡಿಸೆಂಬರ್ ಮೊದಲ ವಾರದಲ್ಲಿ ಬಿಬಿಎಂಪಿ ಚುನಾವಣೆ ಸಂಬಂಧ ಮಹತ್ವದ ಆದೇಶವನ್ನು ಸುಪ್ರೀಂ ಕೋರ್ಟ್ ನೀಡಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.