ಬೆಂಗಳೂರು: ಬಿಬಿಎಂಪಿ ಚುನಾವಣೆಯನ್ನು ಆದಷ್ಟು ಶೀಘ್ರದಲ್ಲಿಯೇ ನಡೆಸಲು ಸರ್ಕಾರ ತಯಾರಿ ಮಾಡಿಕೊಂಡಿದೆ. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಈಗಾಗಲೇ ಒಪ್ಪಿಗೆ ಸಿಕ್ಕಿದೆ. ಇದರ ಬಗ್ಗೆ ವಿಪಕ್ಷಗಳು ಜಂಟಿ ಸದನ ಸಮಿತಿ ರಚಿಸುವಂತೆ ಮನವಿ ಮಾಡಿದ್ದೆವು. ಈಗಾಗಲೇ ಅನೇಕರು ತಮ್ಮ ಸಲಹೆಗಳನ್ನು ನೀಡಿದ್ದಾರೆ. ರಾಜ್ಯಪಾಲರು ಎಷ್ಟು ಬೇಗ ಸಹಿ ಹಾಕಿ ಕಳುಹಿಸುತ್ತಾರೋ ಅಷ್ಟು ಬೇಗ ಪ್ರದೇಶಗಳನ್ನು ಗುರುತಿಸಿ, ಶಾಸಕರ ಬಳಿ ಮತ್ತೊಮ್ಮೆ ಚರ್ಚೆಮಾಡಿ ಚುನಾವಣೆಗೆ ತೆರಳುತ್ತೇವೆ. 73, 74ನೇ ತಿದ್ದುಪಡಿ ಬಗ್ಗೆ ನಮಗೆ ಬದ್ಧತೆಯಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರು ನಗರದ ಚುನಾಯಿತ ಪ್ರತಿನಿಧಿಗಳು ಬಿಬಿಎಂಪಿ ಬಜೆಟ್ ಬಗ್ಗೆ ಚರ್ಚೆ, ಸಲಹೆ ಸೂಚನೆ ವೇಳೆ ತಮ್ಮ ಕ್ಷೇತ್ರದ ಬೇಡಿಕೆಗಳು, ಸಮಸ್ಯೆಗಳು ಸೇರಿದಂತೆ ಹಲವಾರು ವಿಚಾರಗಳನ್ನು ಗಮನಕ್ಕೆ ತಂದಿದ್ದಾರೆ. ಇವುಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಬಜೆಟ್ ಮಂಡಿಸಲಾಗುವುದು ಎಂದರು.
BIG NEWS: ರಾಜ್ಯ ಸರ್ಕಾರದಿಂದ ‘ಅಕ್ರಮ ಕಟ್ಟಡ ನಿರ್ಮಾಣ’ ತಡೆಗೆ ಮಹತ್ವದ ಕ್ರಮ: ‘AI’ ತಂತ್ರಜ್ಞಾನ ಬಳಕೆ
BREAKING : ನಾನು ಸೇರಿದಂತೆ ಎಲ್ಲಾ ವಿರೋಧ ಪಕ್ಷದ ನಾಯಕರ ‘ಫೋನ್ ಟ್ಯಾಪಿಂಗ್’ ಆಗ್ತಿದೆ : ಆರ್ ಅಶೋಕ್ ಸ್ಪೋಟಕ ಹೇಳಿಕೆ!