ಬೆಂಗಳೂರು: ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ವಾಣಿಜ್ಯ ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ಗಳು ಮುಂತಾದವುಗಳು ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸಲಾಗಿದೆ ಮತ್ತು ಕನ್ನಡ ಭಾಷೆಯು ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿತವಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಉಲ್ಲೇಖಿತ ವಿಶೇಷ ರಾಜ್ಯ ಪತ್ರಿಕೆ ಅಧಿಸೂಚನಾ ಪತ್ರದಲ್ಲಿ ಸೂಚಿಸಿರುತ್ತಾರೆ.
ಅದರಂತೆ, ಈ ಹಿಂದೆ ಮಾನ್ಯ ಮುಖ್ಯ ಆಯುಕ್ತರವರ ಅಧ್ಯಕ್ಷತೆಯಲ್ಲಿ ದಿನಾಂಕ: 02-02-2024 ಮತ್ತು 12-02-2024 ರಂದು ನಡೆದ ಸಭೆಯಲ್ಲಿ ಪಾಲಿಕೆಯ ವ್ಯಾಪ್ತಿಯಲ್ಲಿರುವ ಎಲ್ಲಾ ವಾಣಿಜ್ಯ ಉದ್ದಿಮೆಗಳ ದಿನಾಂಕ : 28-02-2024 ರೊಳಗೆ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸುವಂತೆ ಎಲ್ಲಾ ವಾಣಿಜ್ಯದಾರರಿಗೆ ಸೂಚಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ದಿನಾಂಕ: 29-02-2024 ರಿಂದ ಅನ್ವಯವಾಗುವಂತೆ, ಪಾಲಿಕೆಯ ವ್ಯಾಪ್ತಿಯಲ್ಲಿರುವ ವಾಣಿಜ್ಯ ಉದ್ದಿಮೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸದೇ ಇರುವ ವಾಣಿಜ್ಯ ಉದ್ದಿಮೆಗಳನ್ನು ಇಲಾಖಾ ವತಿಯಿಂದ ನೀಡಿರುವ ಉದ್ದಿಮೆ ಪರವಾನಿಗೆಗಳನ್ನು ಅಮಾನತ್ತುಗೊಳಿಸಲು ಹಾಗೂ ಅಂತಹ ವಾಣಿಜ್ಯ ಉದ್ದಿಮೆಗಳನ್ನು ಬೀಗಮುದ್ರೆ (Sealdown) ಮಾಡಲು ಆರೋಗ್ಯ ಇಲಾಖಾವತಿಯಿಂದ ಅಗತ್ಯಕ್ರಮ ಕೈಗೊಳ್ಳಲು ದಿನಾಂಕ: 28-02-2024ರಂದು ಸುತ್ತೋಲೆ ಹೊರಡಿಸಲಾಗಿತ್ತು.
ಮುಂದುವರೆದು, ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದ ಕಡೆ ಶೇ.60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯವಕಾಶ ಬೇಕೆಂಬುದನ್ನು ಪರಿಗಣಿಸಿ, ಸನ್ಮಾನ್ಯ ಉಪ ಮುಖ್ಯಮಂತ್ರಿಗಳು, ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರ ನಿರ್ದೇಶನದ ಮೇರೆಗೆ ಈಗಾಗಲೇ ನೀಡಲಾಗಿದ್ದ ದಿನಾಂಕ: 29-02-2024ರವರೆಗಿನ ಗಡುವನ್ನು ಸಡಿಲಗೊಳಿಸಿ, ದಿನಾಂಕ: 13-03-2024 ರವರೆಗೆ 2 ವಾರಗಳ ಕಾಲ ವಿಸ್ತರಿಸಲಾಗಿದೆ ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರೋಳ್ಕರ್ ವಿಕಾಸ್ ಕಿಶೋರ್ ಅವರು ಪತ್ರಿಕಾ ಸ್ಪಷ್ಠೀಕರಣದ ಮೂಲಕ ತಿಳಿಸಿರುತ್ತಾರೆ.
ಮಾ.31ರವರೆಗೆ ‘ಯಶಸ್ವಿನಿ ಯೋಜನೆ’ಗೆ ಹೊಸ ಸದಸ್ಯರ ನೋಂದಣಿಗೆ ಅವಧಿ ವಿಸ್ತರಣೆ: ‘ರಾಜ್ಯ ಸರ್ಕಾರ’ ಆದೇಶ
ಪಿಎಂ ‘ಜೀವನ್ ಜ್ಯೋತಿ ಬಿಮಾ ಯೋಜನೆ’ ಪ್ರಯೋಜನಗಳೇನು.? ಅರ್ಹತೆಯೇನು.? ಇಲ್ಲಿದೆ, ಮಾಹಿತಿ