ಬೆಂಗಳೂರು : ಮಲ್ಲೇಶ್ವರಂನ ಆಟದ ಮೈದಾನದಲ್ಲಿ ಗೇಟ್ ಬಿದ್ದು ದುರಂತದಲ್ಲಿ ಸಾವಿಗಿಡಾದ ನಿರಂಜನ್ ಪೊಷಕರಿಗೆ ಇಂದು ಒಟ್ಟು 10 ಲಕ್ಷ ಪರಿಹಾರದ ಚೆಕ್ ವಿತರಿಸಲಾಯಿತು.. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಜೊತೆಗೂಡಿ ಬಾಲಕನ ಮನೆಗೆ ಭೇಟಿ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್ ನಿರಂಜನ್ ತಂದೆ ತಾಯಿಗೆ ಸಾಂತ್ವಾನ ಹೇಳಿ ಪರಿಹಾರದ ಚೆಕ್ ವಿತರಿಸಿದರು.
ಬಿಬಿಎಂಪಿ ವತಿಯಿಂದ 5 ಲಕ್ಷ ಪರಿಹಾರ ಹಾಗೂ ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ 5 ಲಕ್ಷ ಸೇರಿದಂತೆ ಒಟ್ಟು 10 ಲಕ್ಷ ಪರಿಹಾರದ ಚೆಕ್ ವಿತರಿಸಲಾಯಿತು.ಪೊಷಕರಿಗೆ ಸಾಂತ್ವಾನ ಹೇಳಿದ ಸಚಿವ ದಿನೇಶ್ ಗುಂಡೂರಾವ್ ಬಾಲಕನ ಸಹೋದರಿಯ ವಿದ್ಯಾಭ್ಯಾಸದ ಸಂಪೂರ್ಣ ಹೊಣೆಯನ್ನ ಆರ್. ಗುಂಡೂರಾವ್ ಫೌಂಡೇಶನ್ ವಹಿಸಿಕೊಳ್ಳಲಿದೆ ಎಂದು ಇದೇ ವೇಳೆ ತಿಳಿಸಿದರು.
ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಕರಣ ಕುರಿತು ಈಗಾಗಲೇ ಎಂಜಿನಿಯರ್ ಶ್ರೀನಿವಾಸ್ ಅವರನ್ನ ಅಮಾನತ್ತು ಮಾಡಲಾಗಿದೆ. ಘಟನೆ ಆದ ತಕ್ಷಣ ಸ್ಥಳಕ್ಕೆ ಶಾಸಕರು ಭೇಟಿ ನೀಡಿ ಸ್ಪಂದಿಸಿದ್ದಾರೆ.ಇಂದು ನಾನು ಮತ್ತು ದಿನೇಶ್ ಗುಂಡೂರಾವ್ ಅವರು ಕುಟುಂಬಕ್ಕೆ ಸಾಂತ್ವನ ಹೇಳಲು ಬಾಲಕನ ಮನೆಗೆ ಭೇಟಿ ನೀಡಿದ್ವಿ.
ಪಾಲಿಕೆಯಿಂದ 5 ಲಕ್ಷ ಹಾಗೂ ಬ್ಲಾಕ್ ಕಾಂಗ್ರೆಸ್ ನಿಂದ 5 ಲಕ್ಷ ಒಟ್ಟು 10 ಲಕ್ಷ ಪರಿಹಾರ ಚೆಕ್ ವಿತರಿಸಿದ್ದೇವೆ. ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗಿದೆ. ಮೃತ ಬಾಲಕನ ಕುಟುಂಬಸ್ಥರು ಸಮಾಜಕ್ಕೆ ಒಳ್ಳೆದಾಗಲಿ ಅಂತಾ ಕಣ್ಣು ದಾನ ಮಾಡಿದ್ದಾರೆ. ನಿಜಕ್ಕೂ ಇದು ಮೆಚ್ಚುವಂತಂದ್ದು.. ಬಾಲಕನ ತಂಗಿಯ ವಿದ್ಯಾಭ್ಯಾಸವನ್ನ ಆರ್. ಗುಂಡೂರಾವ್ ಪೌಂಡೇಷನ್‌ನಿಂದ ನೀಡಲು ನಿರ್ಧರಿಸಲಾಗಿದೆ. ಈ ರೀತಿಯ ಪ್ರಕರಣಗಳು ಮರುಕಳುಸದಂತೆ ಎಚ್ಚರಿಕೆ ವಹಿಸಲು ಬೆಂಗಳೂರಿನಲ್ಲಿರುವ ಎಲ್ಲಾ ಪಾರ್ಕ್ ಚೆಕ್ ಮಾಡಲು ತಿಳಿಸಿದ್ದೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.